Daily Horoscope
✕

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

Sampriya
ಶುಕ್ರವಾರ, 16 ಜನವರಿ 2026 (18:23 IST)
ಗದಗ: ರಾಜ್ಯದಾದ್ಯಂತ ಭಾರೀ ಸುದ್ದಿಯಾಗಿದ್ದ ಗದಗ ಜಿಲ್ಲೆಯ ಲಕ್ಕುಂಡಿ ನಿಧಿ ಸಿಕ್ಕ ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆಯಾಗಿದೆ.  ನಿಧಿ ಸಿಕ್ಕ ಬಳಿಕ ರಾಜ್ಯ ಸರ್ಕಾರ ಶುಕ್ರವಾರ ನಿಧಿ ಹುಡುಕಾಟಕ್ಕೆ ಮುಂದಾಗಿದೆ. 

ಕೇಂದ್ರ ಪುರಾತತ್ವ ಇಲಾಖೆಯಿಂದ ಅನುಮತಿ ಸಿಕ್ಕ ಹಿನ್ನಲೆಯಲ್ಲಿ ಇಂದಿನಿಂದ ಉತ್ಖನನ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ಸರ್ಕಾರವು ಶುಕ್ರವಾರದಿಂದ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಪ್ರಾರಂಭಿಸಿದ್ದು, ಗದಗ ಜಿಲ್ಲಾಧಿಕಾರಿ ಸಿಎನ್ ಶ್ರೀಧರ್, ಗ್ರಾಮವನ್ನು ಸ್ಥಳಾಂತರಿಸುವ ನಿರ್ಧಾರವು ಉತ್ಖನನದ ಸಂಶೋಧನೆಗಳ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.

ಇನ್ನೂ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶ್ರೀಧರ್ ಅವರು, ಗ್ರಾಮವನ್ನು ಸ್ಥಳಾಂತರಿಸುವುದು ಉತ್ಖನನದಿಂದ ಹೊರಬರುವ ಫಲಿತಾಂಶವನ್ನು ಅವಲಂಬಿಸಿರುತ್ತದೆ. ಗ್ರಾಮವನ್ನು ಸ್ಥಳಾಂತರಿಸುವ ಪರಿಸ್ಥಿತಿ ಎದುರಾದರೆ, ರಾಜ್ಯ ಸರ್ಕಾರದ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು. 

ಲಕ್ಕುಂಡಿಯಲ್ಲಿ ಕೋಟೆ ವೀರಭದ್ರೇಶ್ವರ ದೇವಾಲಯದ ಆವರಣದಲ್ಲಿ ಪೂರ್ಣ ಪ್ರಮಾಣದ ಉತ್ಖನನವನ್ನು ಪ್ರಾರಂಭಿಸಲು ಸರ್ಕಾರ ನಿರ್ಧರ ಮಾಡಿದೆ. 

ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ, ಲಕ್ಕುಂಡಿ ಪರಂಪರೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಜಂಟಿಯಾಗಿ ಈ ಯೋಜನೆಯನ್ನು ಕೈಗೆತ್ತಿಕೊಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments