Select Your Language

Notifications

webdunia
webdunia
webdunia
webdunia

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಹೈಕೋರ್ಟ್‌ನಿಂದ ಸಿಟಿ ರವಿಗೆ ಬಿಗ್‌ ರಿಲೀಫ್‌

Minister Lakshmi Hebbalkar, Defamation case, Minister Lakshmi Hebbalkar

Sampriya

ಬೆಂಗಳೂರು , ಗುರುವಾರ, 23 ಜನವರಿ 2025 (15:53 IST)
ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿಗೆ ಬಿಗ್‌ ರಿಲೀಫ್ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್ ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.

ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್​​​ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿದೆ,

ಪ್ರಕರಣದ ಹಿನ್ನೆಲೆ: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಅವರು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂಬ ಆರೋಪವಿದೆ. ಈ ವಿಚಾರದ ಬಗ್ಗೆಯೂ ಹೈಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಡ್ರೀ ಅಂಥಾ ನೂರು ರೆಡ್ಡಿಗಳನ್ನು ನೋಡಿದ್ದೀನಿ: ಡಿಕೆ ಶಿವಕುಮಾರ್