Webdunia - Bharat's app for daily news and videos

Install App

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಹೈಕೋರ್ಟ್‌ನಿಂದ ಸಿಟಿ ರವಿಗೆ ಬಿಗ್‌ ರಿಲೀಫ್‌

Sampriya
ಗುರುವಾರ, 23 ಜನವರಿ 2025 (15:53 IST)
ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿಗೆ ಬಿಗ್‌ ರಿಲೀಫ್ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್ ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.

ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್​​​ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿದೆ,

ಪ್ರಕರಣದ ಹಿನ್ನೆಲೆ: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಅವರು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂಬ ಆರೋಪವಿದೆ. ಈ ವಿಚಾರದ ಬಗ್ಗೆಯೂ ಹೈಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments