ಸಿದ್ದರಾಮಯ್ಯರಿಗೆ 'ಹುಲಿ' ಹೆಸರು ಬಂದಿರುವುದರ ಬಗ್ಗೆ ಕಾರಣ ಬಿಚ್ಚಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್

Sampriya
ಗುರುವಾರ, 15 ಆಗಸ್ಟ್ 2024 (16:16 IST)
ಬೆಂಗಳೂರು: ಇಂದು ದೇಶದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ ಮುಖ್ಯಮಂತ್ರಿಗಳ ಸುರಕ್ಷತೆ ದೃಷ್ಟಿಯಿಂದ ಹಾಕಲಾಗಿದ್ದ ಬುಲೆಟ್‌ ಪ್ರೂಫ್ ಗ್ಲಾಸ್‌ ಅನ್ನು ತೆಗೆಸಿ ಸಿಎಂ ಸಿದ್ದರಾಮಯ್ಯ ಎಲ್ಲರ ಗಮನ ಸೆಳೆದರು. ಭಾಷಣಕ್ಕೂ ಮುನ್ನಾ ಪೊಲೀಸರ ಬಳಿ ನನಗೆ ಬುಲೆಟ್ ಪ್ರೂಫ್ ಬೇಡ ಮೊದಲು ತೆಗಿರಪ್ಪ ಎಂದು ಹೇಳಿದರು. ಅದರಂತೆ ಪೋಡಿಯಂಗೆ ಹಾಕಿದ್ದ ಬುಲೆಟ್ ಪ್ರೂಫ್ ಗ್ಲಾಸ್‌ ಅನ್ನು ತೆಗೆದು ಹಾಕಿದರು. ಇದಾದ ಬಳಿಕ ಯಾವುದೇ ರಕ್ಷಾಕವಚ ಇಲ್ಲದ ಪೋಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರು ಬುಲೆಟ್ ಪ್ರೂಫ್ ಗ್ಲಾಸ್ ತೆಗೆದು ಭಾಷಣ ಮಾಡಿದ್ದಕ್ಕೆ ಪಕ್ಷದ ನಾಯಕರು ಅವರನ್ನು ಕೊಂಡಾಡಿದ್ದಾರೆ.

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿ, ನಮ್ಮ ರಾಜ್ಯ ಶಾಂತಿ ಪ್ರಿಯವಾಗಿದ್ದು, ಇಲ್ಲಿನ ಬುಲೆಟ್ ಪ್ರೂಫ್ ಬೇಕಾಗಿಲ್ಲ. ನಮ್ಮ ಸಿದ್ದರಾಮಯ್ಯನವರು ಯಾವತ್ತೂ ದೈರ್ಯವಂತರು. ಅದರಲ್ಲಿ ಎರಡು ಮಾತಿಲ್ಲ. ಸಿದ್ದರಾಮಯ್ಯನವರಿಗೆ ಹುಲಿ ಎಂದು ಹೆಸರು ಬಂದಿರುವುದೇ ಈ ಕಾರಣಗಳಿಗೆ ಎಂದು ಕೊಂಡಾಡಿದರು. ‌<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments