Select Your Language

Notifications

webdunia
webdunia
webdunia
webdunia

ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಲಕ್ಷ್ಮಿ ಹೆಬ್ಬಾಳ್ಕರ್

ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಲಕ್ಷ್ಮಿ ಹೆಬ್ಬಾಳ್ಕರ್
ಚಾಮರಾಜನಗರ , ಸೋಮವಾರ, 28 ಆಗಸ್ಟ್ 2023 (14:22 IST)
ಚಾಮರಾಜನಗರ : ಬೈಕ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಧಾವಿಸಿ ಮಾನವೀಯತೆ ಮೆರೆದಿದ್ದಾರೆ.
 
ಗೃಹಲಕ್ಷ್ಮಿ ಯೋಜನೆ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ ದೊಡ್ಡರಾಯಪೇಟೆ ಕ್ರಾಸ್ ಬಳಿ ಬೈಕ್ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಿದ್ದು ನರಳಾಡುತ್ತಿದ್ದರು. 

ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವರು, ತಮ್ಮ ಕಾರನ್ನು ನಿಲ್ಲಿಸಿ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.

 

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಕ್ಷೇತ್ರದಲ್ಲೂ ಮೆಡಿಕಲ್ ಕಾಲೇಜು ಇರಬೇಕು- ಡಿಕೆಶಿ