Select Your Language

Notifications

webdunia
webdunia
webdunia
webdunia

ಶಿವಕುಮಾರ್ ಬೆನ್ನಿಗೆ ನಿಂತ ಲಕ್ಷ್ಮೀ ಹೆಬ್ಬಾಳ್ಕರ್

ಶಿವಕುಮಾರ್ ಬೆನ್ನಿಗೆ ನಿಂತ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು , ಬುಧವಾರ, 21 ಡಿಸೆಂಬರ್ 2022 (07:40 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಸಿಬಿಐ ದಾಳಿ ಸರ್ವೆ ಸಾಮಾನ್ಯ, ಡಿ.ಕೆ ಶಿವಕುಮಾರ್ ಅವರು ಕಾನೂನಾತ್ಮಕವಾಗಿ ಹೋರಾಟ ಮಾಡ್ತಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇತ್ತಿಚೀನ ದಿನಗಳಲ್ಲಿ ಸಿಬಿಐ ದಾಳಿ ಸರ್ವೇ ಸಾಮಾನ್ಯವಾಗಿದೆ.

ವಿರೋಧ ಪಕ್ಷಗಳ ಮೇಲೆ ಸಿಬಿಐ, ಇ.ಡಿ, ಐಟಿ ದಾಳಿ ಮಾಡ್ತಾ ಇರೋದು ದೇಶದಲ್ಲಿ ಹಾಗೂ ರಾಜ್ಯದಲ್ಲಿ ಜಗಜ್ಜಾಹೀರಾಗಿದೆ. ಅದರಲ್ಲಿ ಹೊಸದೇನು ಇಲ್ಲ. ಡಿ.ಕೆ ಶಿವಕುಮಾರ್ ಅವರು ಕಾನೂನಾತ್ಮಕವಾಗಿ ಹೋರಾಟ ಮಾಡ್ತಾರೆ ಎಂದು ಹೇಳಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಹೊಸವರ್ಷದಲ್ಲಿ ಜೆಇ ನೇಮಕ ಪರೀಕ್ಷೆ ಫಲಿತಾಂಶ : ಸುನೀಲ್ ಕುಮಾರ್