Publish Date: Fri, 07 Sep 2018 (17:56 IST)
Updated Date: Fri, 07 Sep 2018 (17:59 IST)
ತೀವ್ರ ವಾದ ವಿವಾದಕ್ಕೆ ಕಾರಣವಾಗಿದ್ದರ ಜತೆಗೆ ಸಮ್ಮಿಶ್ರ ಸರಕಾರಕ್ಕೆ ಕಂಟಕವಾದಂತಿದ್ದ ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳು ನಿರೀಕ್ಷೆಯಂತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದ ಪಾಲಾಗಿವೆ. ಇದರಿಂದ ಜಾರಕಿಹೊಳಿ ಬ್ರದರ್ಸ್ ಗೆ ಭಾರಿ ಮುಖಭಂಗವಾದಂತಾಗಿದೆ.
ಬೆಳಗಾವಿ ಪಿಎಲ್ ಡಿ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಮಹದೇವ್ ಪಾಟೀಲ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನವೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣಕ್ಕೆ ಒಲಿದಿದೆ. ಆ ಮೂಲಕ ಸಚಿವ ಜಾರಕಿಹೊಳಿ ಬಣಕ್ಕೆ ಭಾರೀ ಮುಖಭಂಗವಾದಂತಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಯವರ ಸಂಧಾನದ ಫಲವಾಗಿ ಜಾರಕಿಹೊಳಿ ಸಹೋದರರಾದ ಸಚಿವ ರಮೇಶ ಮತ್ತು ಶಾಸಕ ಸತೀಶ್ ಬಣದಿಂದ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಮಹದೇವ್ ಪಾಟೀಲ್ ಅವಿರೋಧ ಆಯ್ಕೆಯಾದರು.