Publish Date: Sun, 20 Aug 2017 (11:27 IST)
Updated Date: Sun, 20 Aug 2017 (11:31 IST)
ಬಿಎಸ್‌ವೈ ಮೇಲಿನ ಭೂಹಗರಣ ಪ್ರಕರಣಕ್ಕೆ ಟ್ವಿಸ್ಟ್ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭೂಸ್ವಾಧೀನಾಧಿಕಾರಿ ಪ್ರಕರಣದಲ್ಲಿ ಭಾಗಿಯಾಗಿದ್ದರಿಂದ ತಪ್ಪಿಸಿಕೊಳ್ಳಲು ಇಂತಹ ತಂತ್ರ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಭೂಸ್ವಾಧೀನಾಧಿಕಾರಿ ಬಸವರಾಜೇಂದ್ರ ಪ್ರಕರಣದಿಂದ ತಪ್ಪಿಸಿಕೊಳ್ಳಲು ಇಂತಹ ಹೇಳಿಕೆ ನೀಡಿದ್ದಾರೆ. ಎಸಿಬಿ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ತಮ್ಮ ಹೇಳಿಕೆ ಪಡೆದಿದ್ದಾರೆ ಎಂದು ಆರೋಪಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಎಸಿಬಿ ಅಧಿಕಾರಿಗಳಾದ ಬಾಲರಾಜ್ ಮತ್ತು ಅಂಥೋಣಿ, ಬಸವರಾಜೇಂದ್ರ ಮೇಲೆ ಯಾವುದೇ ಒತ್ತಡ ಹೇರಿಲ್ಲ. ಪ್ರಕರಣದಿಂದ ಬಚಾವ್ ಆಗಲು ಬಿಜೆಪಿ ನಾಯಕರ ಕುಮ್ಮಕ್ಕಿನ ಮೇರೆಗೆ ಸರಕಾರದ ವಿರುದ್ಧ ಆರೋಪ ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಕಳೆದ 2010-2011 ರಲ್ಲಿ ಭೂ ಸ್ವಾಧೀನಾಧಿಕಾರಿಯಾಗಿದ್ದ ಬಸವರಾಜೇಂದ್ರ, ತಮ್ಮ ಮೇಲೆ ಎಸಿಬಿ ಅಧಿಕಾರಿಗಳು ಸುಳ್ಳು ಸಾಕ್ಷ್ಯ ಹೇಳುವಂತೆ ಒತ್ತಡ ಹೇರಿದ್ದಾರೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪತ್ರ ಬರೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.