ಬೆಳಗಾವಿ : ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕದಲ್ಲಿ ಬಾರೀ ಪ್ರಮಾಣದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರವನ್ನು ಸಂಪರ್ಕಿಸುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭೂ ಕುಸಿತ ಉಂಟಾಗಿದೆ.
									
										
								
																	
ಈ ಭೂ ಕುಸಿತದಿಂದ  ಪುಣೆ-ಬೆಂಗಳೂರು ರಸ್ತೆ ಸಂಪರ್ಕ ಕಡಿತವಾಗಿದೆ. ಆದಕಾರಣ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು,  ಇಂದು ಮಧ್ಯಾಹ್ನದವರೆಗೂ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
									
			
			 
 			
 
 			
			                     
							
							
			        							
								
																	
ಈ ಹಿನ್ನಲೆಯಲ್ಲಿ ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ಯಾರು ಪ್ರಯಾಣ ಮಾಡದಂತೆ ಐಜಿಪಿ ರಾಘವೇಂದ್ರ ಸುಹಾಸ್ ಮನವಿ ಮಾಡಿದ್ದಾರೆ. ಈಗಾಗಲೇ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿರುವ ವಾಹನಗಳು ರಸ್ತೆ ಬದಿಯಲ್ಲಿ ಸಾಲುಗಟ್ಟಿ ನಿಂತಿದ್ದಾವೆ ಎನ್ನಲಾಗಿದೆ.