ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ

Sampriya
ಗುರುವಾರ, 26 ಜೂನ್ 2025 (18:07 IST)
Photo Credit X
ಹಾಸನ: ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಇದರಿಂದ ಬೆಂಗಳೂರು-ಮಂಗಳೂರು  ಸಂಪರ್ಕ ಕಡಿತವಾಗಿದೆ.

ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. 

ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ವಾಹನಗಳನ್ನು ಹಾಸನದಿಂದ ಬೇಲೂರು ಮಾರ್ಗವಾಗಿ ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಆದೇಶ ಮಾಡಿದ್ದಾರೆ.

ಮಂಗಳೂರಿಂದ ಬರುವ ವಾಹನಗಳು ಸಂಪಾಜೆ ಮತ್ತು ಚಾರ್ಮುಡಿ ಘಾಟ್ ಮಾರ್ಗದಲ್ಲಿ ಸಂಚರಿಸಲಿವೆ ಎಂದು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ರಾಹುಲ್ ಗಾಂಧಿ ಮತಗಳ್ಳತನ ಹೋರಾಟದ ಕತೆ ಏನಾಗಲಿದೆ

ಮುಂದಿನ ಸುದ್ದಿ