ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ; ನಾಮಪತ್ರ ವಾಪಸ್ ಪಡೆಯುತ್ತಾರಾ ಮುದ್ದಹನುಮೇಗೌಡ?

ಶುಕ್ರವಾರ, 29 ಮಾರ್ಚ್ 2019 (10:47 IST)
ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ಹೆಚ್.ಡಿ. ದೇವೇಗೌಡರ ವಿರುದ್ಧ ಕಣಕ್ಕಿಳಿದಿರುವ ಮುದ್ದಹನುಮೇಗೌಡ ಅವರು ಇಂದು ನಾಮಪತ್ರ ವಾಪಸ್ ಪಡೆಯುತ್ತಾರಾ ?ಎಂಬ ಗೊಂದಲ ಹಲವರಲ್ಲಿ ಮೂಡಿದೆ.


ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುದ್ದಹನುಮನೇಗೌಡ ಜೊತೆ ಮಾತುಕತೆ ನಡೆಸಿದ್ದು, ನಾಮಪತ್ರ ಹಿಂಪಡೆಯುವಂತೆ ಸೂಚಿಸಿದ್ದಾರೆ. ನಿಮಗೆ ಕ್ಷೇತ್ರ ತಪ್ಪಿಸುವ ಯಾವ ಉದ್ದೇಶವೂ ಇರಲಿಲ್ಲ. ಪಕ್ಷದ ಹಿತದೃಷ್ಠಿಯಿಂದಷ್ಟೇ ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದೇವೆ. ಯಾವ ಕಾರಣಕ್ಕೂ ನಿಮ್ಮನ್ನು ಕಡೆಗಣಿಸುವುದಿಲ್ಲ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.


ಹೀಗಾಗಿ ಮುದ್ದಹನುಮೇಗೌಡರು ಇಂದು ಸಂಜಯನಗರದ ತಮ್ಮ ನಿವಾಸದಲ್ಲಿ ಆಪ್ತರ ಸಭೆ ಕರೆದು, ನಾಮಪತ್ರ ವಾಪಸ್ ಪಡೆಯುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರಿಂದ ಮುದ್ದಹನುಮೇಗೌಡರ ಮುಂದಿನ ನಿರ್ಧಾರ ಏನು ಎಂಬ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪತ್ನಿ ಬೇರೆ ಮಹಿಳೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾಳೆ