Select Your Language

Notifications

webdunia
webdunia
webdunia
webdunia

ಲಾಠಿ ಚಾರ್ಜ್; ಸರಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಲಾಠಿ ಚಾರ್ಜ್; ಸರಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಧಾರವಾಡ , ಶುಕ್ರವಾರ, 9 ಸೆಪ್ಟಂಬರ್ 2016 (16:31 IST)
ಮಂಡ್ಯದ ಕೆಆರ್‌ಎಸ್‌ನಲ್ಲಿ ಧರಣಿನಿರತರ ಮೇಲೆ ಲಾಠಿ ಚಾರ್ಚ್ ಮಾಡಿರುವುದು ಮಹಾಅಪರಾಧ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಮಂಡ್ಯ ಜಿಲ್ಲೆಯಲ್ಲಿ ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಹೇಯ ಕೃತ್ಯ. ಇದರಿಂದ ಮುಂದಾಗುವ ಅನಾಹುತಕ್ಕೆ ಸರಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 
 
ರಾಜ್ಯ ಸರಕಾರ ಈಗಾಗಲೇ ಅನೇಕ ತಪ್ಪುಗಳನ್ನು ಮಾಡಿದೆ. ಸರಕಾರದ ತಪ್ಪುಗಳಿಂದ ಬಡ ರೈತರು ಬಲಿಯಾಗುತ್ತಿದ್ದಾರೆ. ರೈತರಿಗೆ ಸಾಂತ್ವನ ಹೇಳುವುದು ಬಿಟ್ಟು ಸರಕಾರ ಪೊಲೀಸರ ಮೂಲಕ ಲಾಠಿ ಚಾರ್ಜ್ ಮಾಡಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
 
 ಕಾವೇರಿ ಕಣಿವೆಯ ರೈತರು ತಮ್ಮ ಬೆಳೆಗಳಿಗೆ ಮತ್ತು ಕುಡಿಯಲು ನೀರಿಲ್ಲದೇ ಪರದಾಡುತ್ತಿದ್ದಾರೆ. ಸರಕಾರ ಕೂಡಲೇ ರೈತರಿಗೆ ಪರಿಹಾರ ನೀಡುವುದಲ್ಲದೇ ಕೂಡಲೇ ತಮಿಳುನಾಡಿಗೆ ನೀರುಹರಿಸುವುದನ್ನು ನಿಲ್ಲಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಬಂಗಾರಪ್ಪರಂತೆ ಸುಗ್ರೀವಾಜ್ಞೆ ತರಲು ಸಾಧ್ಯವಿಲ್ಲ: ಸಚಿವ ಪಾಟೀಲ್