Publish Date: Sun, 08 Jul 2018 (15:18 IST)
Updated Date: Sun, 08 Jul 2018 (15:30 IST)
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಡಿಡಿಪಿಯು,ಕಾಲೇಜು ಮುಖ್ಯಸ್ಥರಿಗ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್ ನೀಡಲು ಪೋಲಿಸ್ ಇಲಾಖೆ ನಿರ್ಧಾರ ಮಾಡಿದೆ. ಸಿಆರ್ ಪಿಸಿ ಕಾಯ್ದೆ 19 ರ ಅಡಿ ನೋಟಿಸ್ ಜಾರಿ ಮಾಡಿ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳು ಅನುಮತಿ ನೀಡಿದ್ದರ ಬಗ್ಗೆ ಮಾಹಿತಿ ಕೇಳಲಾಗಿದೆ.
ಮಾಹಿತಿ ನೀಡಲು ಶಿಕ್ಷಣ ಇಲಾಖೆ,ಶಾಲಾ ಮುಖ್ಯಸ್ಥರಿಗೆ ನೋಟಿಸ್ ಮೂಲಕ ಸೂಚನೆ ನೀಡಲಾಗಿದೆ. ಉಚಿತ ಬಸ್ ಪಾಸ್ ಒತ್ತಾಯಿಸಿ ನಿನ್ನೆ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಎಬಿವಿಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಇದಾಗಿದೆ. ವಿದ್ಯಾವಾಹಿನಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ರಸ್ತೆ ತಡೆಯಲು ಮುಂದಾದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಲಾಗಿತ್ತು.
ಘಟನೆಯಿಂದ ಕೆಲಕಾಲ ಟ್ರಾಫಿಕ್ ಕಿರಿಕಿರಿಯನ್ನು ಸಾರ್ವಜನಿಕರು ಅನುಭವಿಸಿದ್ದರು. ಘಟನೆ ಹಿನ್ನೆಲೆ ಈಗ ನೋಟಿಸ್ ಜಾರಿಗೊಳಿಸಲಾಗಿದೆ.