Select Your Language

Notifications

webdunia
webdunia
webdunia
Saturday, 5 April 2025
webdunia

ರೈತನ ಮೇಲೆ ಲಾಠಿ ಚಾರ್ಜ್‌: ಸಿಎಂಗೆ ನಾಡಿನ ರೈತರಿಗಿಂತ ಓಲೈಕೆ ರಾಜಕಾರಣವೇ ಹೆಚ್ಚಾಯ್ತ

Chief Minister Siddaramaiah, Waqf Board, Opposition Leader R Ashok

Sampriya

ಬೆಂಗಳೂರು , ಶುಕ್ರವಾರ, 15 ನವೆಂಬರ್ 2024 (17:36 IST)
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ಜಮೀನಿನಲ್ಲಿ ಉಳುಮೆ ಮಾಡಲು ಮುಂದಾಗಿದ್ದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ತನ್ನ ಓಲೈಕೆ ರಾಜಕಾರಣಕ್ಕೆ ರೈತರನ್ನು ಬಲಿಕೊಡಲು ಮುಂದಾಗಿದೆ ಈ ಕಟುಕ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ, ರೈತರ ಜಮೀನಿನ ಮೇಲೆ ಕಬ್ಜಾ ಮಾಡುವುದೇ ಅಲ್ಲದೆ, ಅವರ ಮೇಲೆ ಲಾಠಿ ಚಾರ್ಜ್ ಮಾಡಿ, ಟ್ರ್ಯಾಕ್ಟರ್ ವಶಕ್ಕೆ ಪಡೆದು ರೈತರ ವಿರುದ್ಧ ದೂರು ದಾಖಲಿಸಿಕೊಂಡಿದ್ದೀರಲ್ಲ, ನಿಮಗೆ ನಾಡಿನ ರೈತರಿಗಿಂತ ಓಲೈಕೆ ರಾಜಕಾರಣವೇ ಹೆಚ್ಚಾಯ್ತ?

ಅನ್ನ ಹಾಕುವ ಕೈಗಳಿಗೆ ಕೋಳ ತೊಡಿಸುವ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಅನ್ನದಾತರ ಶಾಪ ಈ ಸರ್ಕಾರವನ್ನು ಸುಡುವ ದಿನ ದೂರವಿಲ್ಲ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರದ ವಿರುದ್ದ ಕೆರಳಿ ಕೆಂಡವಾದ ಸಚಿವ ಕುಮಾರಸ್ವಾಮಿ ಪ್ರಶ್ನೆಗಳು ಹೀಗಿವೆ