Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

Lathi charge
ತುಮಕೂರು , ಶನಿವಾರ, 7 ಜುಲೈ 2018 (19:26 IST)
ತುಮಕೂರಿನಲ್ಲಿ ಉಚಿತ ಬಸ್ ಪಾಸ್ ಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲಿಸರು ಲಾಠಿ ಪ್ರಹಾರ ನಡೆಸಿದ್ದಾರೆ. ತುಮಕೂರಿನ ಶಿವಕುಮಾರ ಸ್ವಾಮೀಜಿ ಸರ್ಕಲ್ ನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು.

ಹೋರಾಟಕ್ಕೆ ಪರವಾನಗಿ ಪಡೆಯದೇ ರಸ್ತೆ ತಡೆ ನಡೆಸಲು ಮುಂದಾಗಿದ್ದರಿಂದ ಪೋಲಿಸರು ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಸಂಚಾರ ನಿಯಂತ್ರಣ ಮಾಡುವ ಅನಿವಾರ್ಯ ಕಾರಣದಿಂದ  ಪೋಲಿಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಲಾಠಿ ಚಾರ್ಜ್ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ಚೆಲ್ಲಾ ಪಿಲ್ಲಿಯಾಗಿ ಓಡಿದ್ದಾರೆ.

ಪೋಲಿಸರ ನಡೆಯನ್ನ ಖಂಡಿಸಿ ವಿದ್ಯಾರ್ಥಿಯೋರ್ವ ಬರುತ್ತಿದ್ದ ಬಸ್ಸಿನ ಕೆಳಗೆ ನುಗ್ಗಿದ್ದ, ಇದ್ರಿಂದಾಗಿ ಕೆಲಕಾಲ ಆತಂಕ ಸೃಷ್ಟಿಗೆ ಕಾರಣವಾಗಿತ್ತು. ಘಟನೆಯ ಕುರಿತು ಹೊಸ ಬಡಾವಣೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಗಳಾದ ಅಪ್ಪು ಪಾಟೀಲ್ ಹಾಗೂ ಚಂದನ್ ಗೋನಾಳನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಚಿವ ಪ್ರಮೋದ ಮಧ್ವರಾಜ್ ಗೆ ಟಾಂಗ್ ನೀಡಿದ ಶಾಸಕ