Select Your Language

Notifications

webdunia
webdunia
webdunia
webdunia

ಮಲೆ ಮಹದೇಶ್ವರ ರಥೋತ್ಸವದ ವೇಳೆ ಲಘು ಲಾಠಿಪ್ರಹಾರ

ಮಲೆ ಮಹದೇಶ್ವರ ರಥೋತ್ಸವದ ವೇಳೆ ಲಘು ಲಾಠಿಪ್ರಹಾರ
ಚಾಮರಾಜನಗರ , ಶುಕ್ರವಾರ, 20 ಅಕ್ಟೋಬರ್ 2017 (18:15 IST)
ಚಾಮರಾಜನಗರ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಇಂದು ಮಹಾ ರಥೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ಇತಿಹಾಸ ಪ್ರಸಿದ್ಧ ರಥೋತ್ಸವಕ್ಕೆ ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸಿದ್ದಾರೆ.

3 ದಿನದಿಂದ ಈ ಜಾತ್ರೆ ನಡೆಯುತ್ತಿದ್ದು, ಇಂದು ರಥೋತ್ಸವದ ವೇಳೆ ನೂಕುನುಗ್ಗಲು ಸಂಭವಿಸಿದೆ. ಈ ಸಂದರ್ಭದಲ್ಲಿ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಇದೇವೇಳೆ ನೂಕುನುಗ್ಗಲಿನಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಗರ್ಭಿಣಿಯಾದ ಅಪ್ರಾಪ್ತೆ