Publish Date: Thu, 08 Jun 2023 (17:42 IST)
Updated Date: Thu, 08 Jun 2023 (15:44 IST)
ಮಹಿಳೆಯರಿಗೆ ಉಚಿತ ಬಸ್ ಪಾಸ್ ಯೋಜನೆಗೆ ಜೂನ್ 11 ಭಾನುವಾರ ಚಾಲನೆ ನೀಡಲಾಗುತ್ತೆ.ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಅಲ್ಲದೇ ಈಗಾಗಲ್ಲೇ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಉಚಿತ ಬಸ್ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ನಾವು ಒಂದು ರೌಂಡ್ ಹೋಗ್ತೆವೆ. ಇನ್ನೂ ಮಧ್ಯಾಹ್ನ 1 ಗಂಟೆಯ ನಂತರ ಉಚಿತ ಬಸ್ ಪಾಸ್ ಸೌಲಭ್ಯ ಪಡೆಯಲು ಅವಕಾಶ ಇರುತ್ತೆ.ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಈ ಯೋಜನೆಗೆ ಚಾಲನೆ ನೀಡ್ತಾರೆ.ಈ ಸಂದರ್ಭದಲ್ಲಿ ಯೋಜನೆ ಲೋಗೋ ಹಾಗೂ ಸ್ಮಾರ್ಟ್ ಕಾರ್ಡ್ ಅನಾವರಣಗೊಳ್ಳುತ್ತೆ.ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಸಿಎಂ ಸಿದ್ದರಾಮಯ್ಯ ಅನಾವರಣ ಮಾಡಲಿದ್ದಾರೆ.ಭಾನುವಾರದಿಂದ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.