Daily Horoscope
✕

ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ

geetha
ಗುರುವಾರ, 7 ಮಾರ್ಚ್ 2024 (14:20 IST)
ಬೆಂಗಳೂರು-ಇಂದಿನಿಂದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.ಶೀಘ್ರವೇ  ನಮ್ಮ ಮೆಟ್ರೋದ ಚಾಲಕ ರಹಿತ ಟ್ರೈನ್  ರಸ್ತೆಗೆ ಇಳಿಯಲಿದೆ.R.V.ರಸ್ತೆಯಿಂದ ಬೊಮ್ಮಸಂದ್ರವರೆಗೆ 18.82 ಕಿ.ಮೀ.ವರೆಗೂ ರೈಲು ಚಲಿಸಲಿದೆ.

ಹಳದಿ ಮಾರ್ಗದಲ್ಲಿ ಚಾಲಕ ರಹಿತ ಟ್ರೈನ್ ಚಲಿಸಲಿದ್ದು,ಸದ್ಯ ಚಾಲಕ ರಹಿತ ಮೆಟ್ರೋ ರೈಲು ಹೆಬ್ಬಗೋಡಿ ಡಿಪೋದಲ್ಲಿದೆ.ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದೆ.ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆ, ರೈಲ್ವೆ ಸುರಕ್ಷತೆಯ ಮುಖ್ಯ ಆಯುಕ್ತರು, ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸುರಕ್ಷತೆ ಮತ್ತು ರೈಲ್ವೆ ಮಂಡಳಿ ಅನುಮೋದನೆ ನೀಡಲಿದೆ.
 
ಮೈಸೂರು ರಸ್ತೆಯ ಚಲ್ಲಘಟ್ಟದಿಂದ ಬಿಡದಿ ತನಕ 15 ಕಿಲೋ ಮೀಟರ್ ವಿಸ್ತರಣೆಗೆ ಪ್ಲಾನ್ ಇದೆ.ಕನಕಪುರ ರಸ್ತೆಯ ರೇಷ್ಮೆ ಸಂಸ್ಥೆಯಿಂದ ಹಾರೋಹಳ್ಳಿ ತನಕ‌ 24 ಕಿಲೋ ಮೀಟರ್,ಬೊಮ್ಮಸಂದ್ರದಿಂದ ಅತ್ತಿಬೆಲೆಗೆ 11 ಕಿಲೋ ಮೀಟರ್ ಮೆಟ್ರೋ ರೈಲು ಸೇವೆ ಕಲ್ಪಿಸಲು ಅಧ್ಯಯನ ಮಾಡಿದ್ದು,ಜೆ.ಪಿ.ನಗರ 4ನೇ ಹಂತದಿಂದ ಕೆಂಪಾಪುರ ತನಕ‌ 32.15 ಕಿಲೋ ಮೀಟರ್,ಸರ್ಜಾಪುರದಿಂದ ಹೆಬ್ಬಾಳ ತನಕ‌ 37 ಕಿಲೋ ಮೀಟರ್, ಹೊಸಹಳ್ಳಿ ಮೆಟ್ರೋ ನಿಲ್ದಾಣದಿಂದ ಕಡಬಗೆರೆಗೆ 12.5 ಕಿಲೋ ಮೀಟರ್, ಕಾಳೇನ ಅಗ್ರಹಾರದಿಂದ ಆನೇಕಲ್‌, ಅತ್ತಿಬೆಲೆ, ಸರ್ಜಾಪುರ, ವರ್ತೂರು ಮಾರ್ಗವಾಗಿ ಕಾಡುಗೋಡಿ ಟ್ರೀ ಪಾರ್ಕ್‌ವರೆಗೆ 68 ಕಿಲೋ‌ಮೀಟರ್ ರೈಲು ಮಾರ್ಗ ನಿರ್ಮಿಸಲು ಕಾರ್ಯ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments