Publish Date: Wed, 16 Nov 2016 (15:06 IST)
Updated Date: Wed, 16 Nov 2016 (15:32 IST)
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಪುತ್ರಿಯ ವಿವಾಹವನ್ನು ಇಷ್ಟು ಅದ್ಧೂರಿಯಾಗಿ ಮಾಡುತ್ತಿರುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಾಕಷ್ಟು ಕಷ್ಟದ ನಂತರ ತಮ್ಮ ಮಗಳ ವಿವಾಹ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುವುದು ಉತ್ತಮವಲ್ಲ. ಮದುವೆ ಅವರವರ ವೈಯಕ್ತಿಕ ವಿಚಾರ ಎಂದು ಹೇಳಿದರು.
ಶಾಸಕನಾಗಿದ್ದಾಗ ಅದ್ಧೂರಿ ವಿವಾಹ ತಡೆಗೆ ಖಾಸಗಿ ವಿಧೇಯಕ ಮಂಡಿಸಿದ್ದೆ. ಅದ್ಧೂರಿ ವಿವಾಹಗಳನ್ನು ಯಾರು ನಡೆಸಬಾರದು. ಸ್ವಯಂ ನಿಯಂತ್ರಣ ಹಾಕಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು.
ಬಿಜೆಪಿ ನಾಯಕರು ರೆಡ್ಡಿ ಪುತ್ರಿಯ ಅದ್ಧೂರಿ ವಿವಾಹದಲ್ಲಿ ಭಾಗವಹಿಸಿದ್ದಾರೆ. ಇದು ಅವರವರ ವೈಯಕ್ತಿಕ ವಿಚಾರ. ಇದರ ಬಗ್ಗೆ ಕೇಂದ್ರವೆ ಉತ್ತಮ ನಿರ್ಧಾರ ತೆಗೆದುಕೊಳ್ಳುವುದು ಸರಿಯೆನಿಸುತ್ತಿದೆ ಎಂದು ಬಿಜೆಪಿ ನಾಯಕರನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ