Select Your Language

Notifications

webdunia
webdunia
webdunia
webdunia

ಶಾಸಕ ಜಮೀರ್ ಅಹ್ಮದ್ ಶುಕ್ರವಾರ ದೆಹಲಿಯಲ್ಲಿರುವ ಇ.ಡಿ. ಕಚೇರಿಗೆ ಭೇಟಿ

Lawmaker Zamir Ahmed was in Delhi on Friday for an ED.
bangalore , ಶುಕ್ರವಾರ, 1 ಅಕ್ಟೋಬರ್ 2021 (22:14 IST)
ಬೆಂಗಳೂರು: ಜಾರಿ ನಿರ್ದೇಶನಾಲಯದ ಸೂಚನೆಯ ಮೇರೆಗೆ ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಶುಕ್ರವಾರ ದೆಹಲಿಯಲ್ಲಿರುವ ಇ.ಡಿ. ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾದರು.
ಕಳೆದ ತಿಂಗಳು ಬೆಂಗಳೂರಿನಲ್ಲಿ ತಮ್ಮ ಮನೆಗಳು ಮತ್ತು ಕಚೇರಿಗಳ ಮೇಲೆ ನಡೆದಿದ್ದ ಇಡಿ ದಾಳಿಯ ಸಂಬಂಧ ದಾಖಲೆ ಸಲ್ಲಿಸಲು ಇಡಿ ಕಚೇರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಜಮೀರ್ ಆಹ್ಮದ್ ಖಾನ್ ಗುರುವಾರ ಸಂಜೆ ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದಾರೆ. ದಾಳಿಯಾದ ನಂತರ ಇ.ಡಿ ಕಚೇರಿಗೆ ಕೆಲವು ದಾಖಲೆಗಳನ್ನು ಜಮೀರ್ ಆಹ್ಮದ್ ಖಾನ್ ನೀಡಿದ್ದರು. ಈ ವೇಳೆ ಮತ್ತಷ್ಟು ದಾಖಲೆಗಳನ್ನು ನೀಡುವಂತೆ ಇ.ಡಿ ಅಧಿಕಾರಿಗಳು ಸೂಚಿಸಿದ್ದರು. ಈ ಹಿನ್ನೆಲೆ ದಾಖಲೆಗಳನ್ನ ನೀಡಲು ತೆರಳಿರುವ ಶಾಸಕ ಜಮೀರ್ ದೆಹಲಿಯ ಖಾನ್ ಮಾರ್ಕೆಟ್ ಬಳಿಯಿವ ಇ.ಡಿ. ಕಚೇರಿಗೆ ತೆರಳಿ ದಾಖಲೆಗಳನ್ನ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇ.ಡಿ. ದೂರವಾಣಿ ಕರೆ:
ಇ.ಡಿ. ಅಧಿಕಾರಿಗಳು ದೂರವಾಣಿ ಕರೆ ಮಾಡಿ ಬರುವುದಕ್ಕೆ ಹೇಳಿದ್ದರು, ಬಂದಿದ್ದೇನೆ. ಈ ಹಿಂದೆ ಹೇಳಿಕೆ ದಾಖಲಿಸಿದ್ದೆ, ಅಗತ್ಯ ದಾಖಲೆ ನೀಡಿದ್ದೆ. ಕೆಲ ವಿಚಾರಗಳ ಬಗ್ಗೆ ಸ್ಪಷ್ಟನೆ ನೀಡಲು ವಿಚಾರಣೆಗೆ ಬಂದಿದ್ದೇನೆ ಎಂದು ದೆಹಲಿಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಧ್ಯಕ್ಷ ಕಾಳೇಗೌಡ ಮತ್ತು ಅಪ್ಪಾಜಿಗೌಡ ಸೇರಿದಂತೆ ಒಟ್ಟು ಮೂವರ ವಿರುದ್ಧ ವಿವಿಪುರಂ‌ ಪೊಲೀಸರು ಎಫ್ ಐಆರ್