ಬೆಳಗಾವಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಇನ್ನೂ ಸರಿಯಾಗಿ ಫಲಾನುಭವಿಗಳಿಗೆ ತಲುಪಿಲ್ಲ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಮಾಧ್ಯಮಗಳಿಗೆ ಏನು ಹೇಳಿದ್ರು ನೋಡಿ.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳ ಮುಂದೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಹಣ ಇನ್ನೂ ಕ್ರೆಡಿಟ್ ಆಗಿಲ್ಲ ಎಂಬ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ.
8-10 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಪೂರ್ತಿಯಾಗಿ ನೀಡುತ್ತೇವೆ ಎಂದು ಹೇಳಿದ್ದೆ. ಈಗಾಗಲೇ 2 ದಿನ ಆಗಿದೆ ಅಷ್ಟೇ. ಇನ್ನು ಎಂಟು ದಿನಗಳಲ್ಲಿ ಎಲ್ಲವೂ ಕ್ಲಿಯರ್ ಆಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಬಿಜೆಪಿಯವರು ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಏನೇ ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯತಿ ಮೂಲಕ ಬಿಡುಗಡೆಯಾಗಬೇಕು ಎಂದಿರುವುದರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ನೀಡುವ ಗೃಹಲಕ್ಷ್ಮಿ ಹಣ ನಿಲ್ಲಲ್ಲ ಎಂದು ಭರವಸೆ ನೀಡಿದ್ದಾರೆ.