Publish Date: Wed, 01 Jul 2026 (23:54 IST)
Updated Date: Thu, 02 Jul 2026 (00:02 IST)
ಬೆಂಗಳೂರು: ಆರ್‌ಎಸ್‌ಎಸ್ ನೋಂದಣಿ ವಿವಾದ ಸಂಬಂಧ ಆರ್‌ಎಸ್‌ಎಸ್ ನೋಂದಣಿ ವಿವಾದಕ್ಕೆ ಸಂಬಂಧಸಂಘದ ಮುಖಂಡರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಈ ಕುರಿತು ಇಂದು ನಡೆದ ಆರ್‌ಎಸ್‌ಎಸ್ ಬೈಠಕ್‌ನಲ್ಲಿ ಬಿಜೆಪಿ ನಾಯಕರಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಆರ್‌ಎಸ್‌ಎಸ್ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಸರಸಂಘಚಾಲಕ ಮೋಹನ್ ಭಾಗವತ್ ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ.
ಕೇರಳದಲ್ಲಿಯೂ ಈ ಕುರಿತು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಕರ್ನಾಟಕದಲ್ಲೂ ಈ ವಿಷಯದ ಬಗ್ಗೆ ಈ ಹಿಂದೆ ಮಾತನಾಡಲಾಗಿದೆ ಎಂದು ಸಂಘದ ಮುಖಂಡರು ಸಭೆಯಲ್ಲಿ ಉಲ್ಲೇಖ ಮಾಡಿದ್ದಾರೆ.
ನೂರು ವರ್ಷಗಳಿಂದಲೂ ಸಂಘದ ಬಗ್ಗೆ ಪ್ರಶ್ನೆಗಳು ಎದ್ಧೇಳುತ್ತಾನೆ ಇದೆ. ಈ ವಿಚಾರವನ್ನು ಮುಂದುವರಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂಬ ಅಭಿಪ್ರಾಯವನ್ನೂ ಸಭೆಯಲ್ಲಿ ವ್ಯಕ್ತಪಡಿಸಲಾಗಿದೆ.
ಪ್ರಿಯಾಂಕ್ ಖರ್ಗೆ ಅವರು ಕೇಳಿರುವ ಪ್ರಶ್ನೆಗಳು ರಾಜಕೀಯ ಉದ್ದೇಶದಿಂದಲೇ ಕೇಳಿರುವುದು ಸ್ಪಷ್ಟ. ಆದ್ದರಿಂದ ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದರೆ ವಿವಾದ ಮತ್ತಷ್ಟು ಜೀವಂತವಾಗುವ ಸಾಧ್ಯತೆಯಿದೆ. ಆದ್ದರಿಂದ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ ಸುಮ್ಮನಿರುವುದೇ ಸೂಕ್ತ ಎಂದು ಸಂಘದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ