ಮೈಸೂರು : ಇಂದು ಆಷಾಢ ಮಾಸ ಮೊದಲ ಶುಕ್ರವಾರ. ಆಷಾಢ ಮಾಸದ ನಾಲ್ಕು ಶುಕ್ರವಾರಗಳಲ್ಲೂ ಚಾಮುಂಡಿ ತಾಯಿಯ ದರ್ಶನ ಮಾಡಿದರೆ ಒಳ್ಳೆಯದಾಗುತ್ತೆ ಎಂಬ ಭಾವನೆ.
ಹೀಗಾಗಿ ಆಷಾಢದ ಎಲ್ಲಾ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಚಾಮುಂಡಿ ಬೆಟ್ಟಕ್ಕೆ ಬರ್ತಾರೆ. ಭಕ್ತರ ಅನುಕೂಲಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಸಕಲ ವ್ಯವಸ್ಥೆಗಳು ಆಗಿವೆ.
ತಿರುಪತಿ ಮಾದರಿಯಲ್ಲಿ ಭಕ್ತರಿಗೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಯಿ ಚಾಮುಂಡಿ ದರ್ಶನಕ್ಕೆ ಬರುವ ಭಕ್ತರಿಗೆ ನ್ಯೂ ರೂಲ್ಸ್ ಮಾಡಲಾಗಿದೆ.
ಎರಡು ಡೋಸ್ ಕೊರೋನಾ ಲಸಿಕೆ ಕಡ್ಡಾಯ ಹಾಕಿಸಿರಬೇಕು. ಇಲ್ಲದಿದ್ದರೆ 72 ಗಂಟೆ ಮುಂಚಿತವಾದ ಕೋವಿಡ್ ನೆಗೆಟಿವ್ ರೀಪೋರ್ಟ್ ಇರಬೇಕು. ಹಾಗಿದ್ರೆ ಮಾತ್ರ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ಅವಕಾಶ ಇರಲಿದೆ. ಮುಂಜಾನೆ 5.30ರಿಂದ ರಾತ್ರಿ 9.30ರವರೆಗೆ ದರ್ಶನಕ್ಕೆ ಅವಕಾಶವಿದೆ.