ರಾಮನಗರ : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾಳೆಯಿಂದ (ಜ. 9) ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿರುವುದರಿಂದ ಈಗಾಗಲೇ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಸಭೆ ನಡೆಸಿದ್ದಾರೆ.
ಈ ನಡುವೆ ಕಾಂಗ್ರೆಸ್ ಪಾದಯಾತ್ರೆಗೆ ಅನುಮತಿ ನೀಡಲು ಆಗುವುದಿಲ್ಲ, ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡುವಂತಿಲ್ಲ ಎಂದು ಮರಳೆ ಗ್ರಾಮದಲ್ಲಿ ರಾಮನಗರ ಎಸ್‌ಪಿ ಗಿರೀಶ್ ಹೇಳಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳೆ ಗ್ರಾಮದಲ್ಲಿ ಹೇಳಿಕೆ ನೀಡಿರುವ ಎಸ್ಪಿ ಗಿರೀಶ್, ಈಗಾಗಲೇ ಪಾದಯಾತ್ರೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಲಾಗಿದೆ.
ವೀಕೆಂಡ್ ಕರ್ಫ್ಯೂ ನಡುವೆ ಪಾದಯಾತ್ರೆಗೆ ಅನುಮತಿ ನೀಡುವ ಪ್ರಶ್ನೆಯೇ ಬರುವುದಿಲ್ಲ. ಪಾದಯಾತ್ರೆ ಮಾಡುವುದು ತಪ್ಪು ಎಂದು ಕೇಳಿಕೊಳ್ಳುತ್ತೇನೆ. ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದೇನೆ.
ನಿಯಮ ಮೀರಿ ಪಾದಯಾತ್ರೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.