Select Your Language

Notifications

webdunia
webdunia
webdunia
webdunia

ಕರ್ನಾಟಕ ಬಂದ್ ಮಾಡಿದರೆ ಕಾನೂನು ಕ್ರಮ- ಸಚಿವ ಜಿ.ಪರಮೇಶ್ವರ್

ಕರ್ನಾಟಕ ಬಂದ್ ಮಾಡಿದರೆ ಕಾನೂನು ಕ್ರಮ- ಸಚಿವ ಜಿ.ಪರಮೇಶ್ವರ್
bangalore , ಗುರುವಾರ, 28 ಸೆಪ್ಟಂಬರ್ 2023 (19:00 IST)
ಕಾವೇರಿ ವಿಚಾರವಾಗಿ ಸರ್ಕಾರದ ವಿರುದ್ಧ ಹಳೇ ಮೈಸೂರು ಭಾಗ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿದಡೆ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ ಸೇರಿದಂತೆ ವಿವಿಧ ಸಂಘಟನೆಗಳು ಕರ್ನಾಟಕ ಬಂದ್  ಗೆ ಕರೆ ನೀಡಿವೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ ಪ್ರತಿಭಟನೆ ಮಾಡೋದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ಬಂದ್ಗೆ ಅವಕಾಶವಿಲ್ಲ ಎಂದರು. ಯಾವ ಸಂಘಟನೆಗಳು ಬಂದ್ಗೆ ಕರೆ ಕೊಟ್ಟಿವೆಯೋ ಅವರಿಗೆ ತಿಳಿಸುತ್ತಿದ್ದೇನೆ, ಕೋರ್ಟ್ ಕೂಡ ಹೇಳಿದೆ, ಯಾವುದೇ ಬಂದ್ ಮಾಡುವಂತಿಲ್ಲ. ಇದನ್ನ ಮೀರಿ ಬಂದ್ ಮಾಡಿದರೇ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಯಾವ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ನಿರ್ದೇಶನ ಕೊಡುವ ಅಗತ್ಯವಿಲ್ಲ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಜಪಡೆಯಲ್ಲಿ ಅರ್ಜುನ, ಭೀಮ ಬಲಶಾಲಿಗಳು !