Publish Date: Wed, 28 Dec 2022 (17:21 IST)
Updated Date: Wed, 28 Dec 2022 (17:24 IST)
ಅಸ್ಸಾಂನಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಮೂವರು ಅರಣ್ಯಾಧಿಕಾರಿಗಳು ಸೇರಿದಂತೆ ಕನಿಷ್ಠ 15 ಜನರು ಗಾಯಗೊಂಡಿದ್ದಾರೆ. ಅಸ್ಸಾಂನ ಜೋರ್ಹತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಚಿರತೆ ಅರಣ್ಯ ಅಧಿಕಾರಿಗಳು ಮತ್ತು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮಳೆ ಅರಣ್ಯ ಸಂಶೋಧನಾ ಸಂಸ್ಥೆ ನಿವಾಸಿಗಳ ಮೇಲೆ ದಾಳಿ ಮಾಡಿದೆ ಎಂದು ಅರಣ್ಯ ಸಂಶೋಧನಾ ಸಂಸ್ಥೆ ತಿಳಿಸಿದೆ. ಕಾರಿನ ಮೇಲೆ ಎಗರಿ ಚಿರತೆಯೊಂದು ಹಲ್ಲೆ ಮಾಡುವ ದೃಶ್ಯ ವೈರಲ್ ಆಗಿದೆ.