Webdunia - Bharat's app for daily news and videos

Install App

ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ

Webdunia
ಮಂಗಳವಾರ, 23 ಆಗಸ್ಟ್ 2022 (20:00 IST)
ಬೆಳಗಾವಿ ನಗರದ ಗಾಲ್ಫ್ ಮೈದಾನದಲ್ಲಿ ಕಾಣಿಸಿಕೊಂಡಿರುವ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಇಂದೂ ಸಹ ಮುಂದುವರಿದಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚುವರಿಯಾಗಿ ಇಬ್ಬರು ಶೂಟರ್​ಗಳೂ ಪಾಲ್ಗೊಂಡಿದ್ದಾರೆ. ಚಿರತೆ ಸೆರೆ ಕಾರ್ಯಾಚರಣೆಗೆ ನೆರವಾಗಲೆಂದು ಸಂಜೆ ವೇಳೆಗೆ ಸಕ್ರೆಬೈಲ್‌‌ನಿಂದ ಆನೆಗಳು ಬರುವ ಸಾಧ್ಯತೆಯಿದೆ. 250 ಎಕರೆ ಪ್ರದೇಶ ವಿಸ್ತೀರ್ಣದ ಗಾಲ್ಫ್ ಮೈದಾನದಿಂದ ಚಿರತೆ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರಿದಿದೆ. ನಿನ್ನೆ ಎರಡು ಬಾರಿ ಚಿರತೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಆನೆಗಳು ಬಂದ ನಂತರ ಆನೆಗಳ ನೆರವಿನೊಂದಿಗೆ ಮತ್ತೊಮ್ಮೆ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಲಿದ್ದಾರೆ. ಗಾಲ್ಫ್ ಮೈದಾನಕ್ಕೆ ಬಂದಿರುವ ಹಂದಿ ಹಿಡಿಯುವ ಯುವಕರು ಸುಮಾರು 20 ನಾಯಿಗಳನ್ನು ಕರೆತಂದಿದ್ದಾರೆ. ನಾಯಿಗಳ ನೆರವಿನೊಂದಿಗೆ ಅವರೂ ಶೋಧ ಕಾರ್ಯಾಚರಣೆ ನಡೆಸಿದ್ದರು. ಚಿರತೆ ಪತ್ತೆಯಾಗದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆಯನ್ನು ಮುಂದುವರಿಸಲು ತಾಲ್ಲೂಕು ಆಡಳಿತ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments