Publish Date: Tue, 02 Sep 2025 (17:32 IST)
Updated Date: Tue, 02 Sep 2025 (17:36 IST)
ಬೆಂಗಳೂರು: ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂಡಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. 2017ರಲ್ಲಿ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು. ಆಗ ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ಎಲ್ಲಿ ಹೋಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಅವರು, ಬಾನು ಮುಪ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಸ್ವಾಗತಿಸುರುವುದನ್ನು ಮತ್ತೇ ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದಾರೆ.
ಬಾನು ಅವರು ಕುಂಕುಮ, ಅರಶಿನದ ಬಗ್ಗೆ ಮಾತನಾಡಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅವರೊಬ್ಬ ಕನ್ನಡದ ಬರಹಗಾರ್ತಿ. ಕನ್ನಡದ ಮೇಲೆ ಅಭಿಮಾನವಿಲ್ಲದೆ ಇದ್ದರೆ, ಪ್ರೀತಿ ಇಲ್ಲದೆ ಇದ್ದರೆ ಬರೆಯಲು ಸಾಧ್ಯವೇ?
ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ. ಮುಸ್ಲಿಂ ಗುರುಗಳು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.