Publish Date: Mon, 01 Apr 2019 (12:45 IST)
Updated Date: Tue, 02 Apr 2019 (14:40 IST)
ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಡೈರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಡೈರಿ ಆರೋಪ ಸಾಬೀತು ಮಾಡಿಲಿ, ಇಲ್ವೇ ರಾಜೀನಾಮೆ ನೀಡಿಲಿ ಎಂದು ಬಹಿರಂಗವಾಗಿ ಸವಾಲು ಹಾಕಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು’ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ಮನುಷ್ಯ. ಡೈರಿಯಲ್ಲಿ ಅಡ್ವಾಣಿಗೆ ಹಣ ಕೊಟ್ಟಿರುವ ಬಗ್ಗೆ ಬರೆದಿದ್ದೇನಂತೆ. ರಾಹುಲ್ ಗಾಂಧಿ ಮಾಡಿರುವ ಆರೋಪ ಸಾಬೀತು ಪಡಿಸಲಿ. ಇಲ್ಲದಿದ್ದರೆ ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೆ ಅಪಪ್ರಚಾರ ಶೋಭೆ ತರಲ್ಲ. ಅವ್ರು ಮಾಡಿದ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.