ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

Sampriya
ಶನಿವಾರ, 6 ಡಿಸೆಂಬರ್ 2025 (21:53 IST)
ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ನನಗೆ, ಡಿ.ಕೆ. ಸುರೇಶ್ ಅವರಿಗೆ ನೋಟಿಸ್ ಕೊಡುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ. ಈ ರೀತಿ ನಡೆದುಕೊಳ್ಳುವ ಮೂಲಕ ನನ್ನನ್ನು ಹೆದರಿಸಬಹುದು ಎಂದುಕೊಂಡಿದ್ದಾರೆ. ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ ಎಂದು ಉಪ ಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮನ್ನು ಅವರು ಕರೆಯಬಾರದಿತ್ತು. ಎಲ್ಲ ವಿವರವನ್ನು ಜಾರಿ ನಿರ್ದೇಶನಾಲಯಕ್ಕೆ ಕೊಟ್ಟಿದ್ದು, ಚಾರ್ಜ್‌ಶೀಟ್‌ನಲ್ಲಿ ನಮ್ಮ ಹೆಸರು ಸೇರಿಸಿಲ್ಲ. ನಮ್ಮ ಹೇಳಿಕೆ ತೆಗೆದುಕೊಂಡು ಬಿಟ್ಟಿದ್ದರು ಎಂದು ವಿವರಿಸಿದರು. 

ಇನ್ನೂ ವಿರೋಧ ಪಕ್ಷಗಳು ಟೀಕೆ ಮಾಡುತ್ತಿರುವ ಕಾರ್ಟಿಯರ್ ವಾಚ್ ವಿಚಾರವಾಗಿ ಪ್ರತಿಕ್ರಿಯಿಸಿದ, ಯಾರು ಯಾವ ಶರ್ಟ್ ಹಾಕ್ತಾರೆ? ಯಾವ ವಾಚ್ ಹಾಕ್ತಾರೆ? ಯಾವ ಕನ್ನಡಕ ಹಾಕ್ತಾರೆ? ಈ ಬಗ್ಗೆ ನಾನು ಯಾರನ್ನೂ ಪ್ರಶ್ನೆ ಮಾಡಲ್ಲ. ಇವೆಲ್ಲ ಅವರ ವೈಯುಕ್ತಿಕ ವಿಚಾರಗಳು. ನಾನು ₹ 1 ಸಾವಿರದ ವಾಚು ಕಟ್ಟುತ್ತೇನೋ, ₹ 10 ಲಕ್ಷದ ವಾಚು ಕಟ್ಟುತ್ತೇನೋ ಅದು ನನಗೆ ಬಿಟ್ಟಿದ್ದು. ಅದು ನನ್ನ ಆಸ್ತಿ, ನನ್ನ ಕಷ್ಟ, ನನ್ನ ಶ್ರಮ ಎಂದು ಟೀಕೆಗಳಿಗೆ ಕೌಂಟರ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments