Select Your Language

Notifications

webdunia
webdunia
webdunia
webdunia

ಒರಿಜಿನಲ್ JDS ಎಂದು ಬೋರ್ಡ್ ಹಾಕಿಕೊಳ್ಳಲಿ

JDS minority leader
bangalore , ಮಂಗಳವಾರ, 17 ಅಕ್ಟೋಬರ್ 2023 (14:44 IST)
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿಮಗೆ ಅದು ದೊಡ್ಡದಾಗಿ ಕಾಣುತ್ತಿದೆ. ಏನು ಸರಿ ಮಾಡಬೇಕೋ ಅದನ್ನು ನಾವು ಮಾಡುತ್ತೇವೆ.. ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಅವರೇ ಒರಿಜಿನಲ್ ಎಂದು ಬರೆದುಕೊಳ್ಳಲಿ ಎಂದು ಟಾಂಗ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಹಾಗೂ ನಿಖಿಲ್ ಪಕ್ಷದಿಂದ ಉಚ್ಚಾಟನೆ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಅವರಿಗೆ ಬಿಟ್ಟಿದ್ದು. ದಯವಿಟ್ಟು ಇಂತಾ ಸಿಲ್ಲಿ ವಿಚಾರಕ್ಕೆ ಬರಬೇಡಿ. ನಮಗೆ ಏನು ಮಾಡಬೇಕೊ, ಸರಿ ಮಾಡುತ್ತೇವೆ. ನೀವು ತಲೆಕೆಡಿಸಿಕೊಂಡು ಬಂದಿದ್ದೀರಾ? ಅವರು ಫ್ರೀ ಇದ್ದಾರೆ ಮಾತಾಡ್ಕೊಳ್ಳಿ. ನಮ್ಮ ಪಕ್ಷದಲ್ಲಿ ಇರುವ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನೀವು ಯಾಕೆ ವರಿ ಮಾಡಿಕೊಳ್ಳುತ್ತೀರಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿಎಂ ಡಿಕೆಶಿವಕುಮಾರ್ ಗೆ ಅಶ್ವಥ್ ನಾರಾಯಣ್ ತಿರುಗೇಟು