Publish Date: Wed, 27 Dec 2017 (21:59 IST)
Updated Date: Wed, 27 Dec 2017 (22:01 IST)
ಮಹಾದಾಯಿ ನದಿ ನೀರನ್ನು ತಿರುವಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದು ಸರಿಯಲ್ಲ ಎಂದು ಹೇಳಿ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೈಸೂರಿನ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಯಡಿಯೂರಪ್ಪನವರಿಗೆ ಜನತೆಯ ಬಗ್ಗೆ ಕಾಳಜಿ ಇದ್ದರೆ ಕುಡಿಯುವ ನೀರಿನ ಉದ್ದೇಶಕ್ಕೆ 7.56 ಟಿ.ಎಂ.ಸಿ ನೀರು ಕೊಡಲು ನಾವು ಒಪ್ಪಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಂದ ಅಫಿಡವಿಟ್ ಬರೆಸಿ ಮಹದಾಯಿ ನ್ಯಾಯಮಂಡಳಿಗೆ ಸಲ್ಲಿಸಲಿ. ಅದನ್ನು ಬಿಟ್ಟು ಜನತೆಯ ಮುಂದೆ ಬೇಜವಾಬ್ದಾರಿಯ ಮಾತುಗಳನ್ನು ಆಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯನವರು ಈಚೆಗೆ ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, ಕನ್ನಡಿಗರ ಬಗ್ಗೆ ಕಾಳಜಿಯಿದ್ದರೆ, ಗೋವಾ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆಯನ್ನು ಖಂಡಿಸಿ ಹಾಗೂ ಸೋನಿಯಾ ಗಾಂಧಿ ಹೇಳಿದ್ದು ಸರಿಯಲ್ಲ ಎಂದು ಹೇಳಿ ನೋಡೋಣ ಎಂದು ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.