ಭಾರತದ ಅಭಿವೃದ್ಧಿಗೆ ಶ್ರಮಿಸೋಣ : ಗೆಹ್ಲೋಟ್

Webdunia
ಗುರುವಾರ, 18 ಆಗಸ್ಟ್ 2022 (12:03 IST)
ತುಮಕೂರು : ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಸಮರ್ಪಣೆಯನ್ನು ಸ್ಮರಿಸುವುದರ ಜೊತೆಗೆ ದೇಶದ ಅಭಿವೃದ್ಧಿಗಾಗಿ ನಾವೆಲ್ಲರೂ ಶ್ರಮಿಸಬೇಕು.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. “ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ” ತುಮಕೂರು ವತಿಯಿಂದ ಭಾರತೀಯ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಮೃತ ಭಾರತ ರಾಷ್ಟ್ರೀಯ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಜಾದಿಯ ಅಮೃತ್ ಮಹೋತ್ಸವವು 75 ವರ್ಷಗಳ ಪ್ರಗತಿಪರ ಭಾರತ ಮತ್ತು ಜನರು, ಸಂಸ್ಕೃತಿ ಮತ್ತು ಸಾಧನೆಗಳ ವೈಭವದ ಇತಿಹಾಸವನ್ನು ಸ್ಮರಿಸಲು ಮತ್ತು ಆಚರಿಸಲು ಭಾರತ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದೆ.

ಭಾರತೀಯರಾದ ನಮಗೆಲ್ಲ ಅಷ್ಟು ಸುಲಭವಾಗಿ ಸ್ವಾತಂತ್ರ್ಯ ಸಿಕ್ಕಿಲ್ಲ. ಈ ಸ್ವಾತಂತ್ರ್ಯಕ್ಕಾಗಿ ಅನೇಕ ದೇಶಭಕ್ತರು ಬಲಿದಾನ ಮಾಡಿದ್ದಾರೆ ಎಂದು ಹೇಳುವ ಮೂಲಕ ಸ್ವಾತಂತ್ರಕ್ಕಾಗಿ ಹೋರಾಡಿದ ದೇಶ ಭಕ್ತರನ್ನು ಸ್ಮರಿಸಿದರು.

ಅಮೃತ್ ಸ್ವಾತಂತ್ರ್ಯೋತ್ಸವವು ಭಾರತದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆರ್ಥಿಕ ಪ್ರಗತಿಯ ವಿಶಿಷ್ಟ ಲಕ್ಷಣವಾಗಿದೆ. ಈ ಹಬ್ಬವು ಭಾರತದ ಜನತೆಗೆ ಸಮರ್ಪಿತವಾಗಿದೆ. ಪ್ರಧಾನಿ ಮೋದಿಯವರ ಸ್ವಾವಲಂಬಿ ಭಾರತದ ಕನಸನ್ನು ನನಸಾಗಿಸುವ ಶಕ್ತಿ ಮತ್ತು ಸಾಮರ್ಥ್ಯವನ್ನು ಹೊಂದಿದ್ದಾರೆ. ಭಾರತವನ್ನು ಅದರ ಅಭಿವೃದ್ಧಿ ಪಯಣದಲ್ಲಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ ಪರಿಸರ ಸಂರಕ್ಷಣೆ, ಗೋವುಗಳ ರಕ್ಷಣೆ, ನೈತಿಕ ಶಿಕ್ಷಣ, ಸಾವಯವ ಕೃಷಿ ಉತ್ತೇಜನ, ರಾಷ್ಟ್ರೀಯತೆ ಮತ್ತು ಆರೋಗ್ಯ ಸೌಲಭ್ಯಗಳಿಗಾಗಿ ಶ್ರದ್ಧೆಯಿಂದ ಕೆಲಸ ಮಾಡುತ್ತಿರುವುದಕ್ಕೆ ಗೌರವಾನ್ವಿತ ರಾಜ್ಯಪಾಲರು ಅಭಿನಂದಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ನಟ ಮಯೂರ್ ಪಟೇಲ್ ವಿರುದ್ಧ ಕೇಸ್

Karnataka Weather: ಕರ್ನಾಟಕದ ಇಂದಿನ ಹವಾಮಾನ ವರದಿ ಇಲ್ಲಿದೆ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಮುಂದಿನ ಸುದ್ದಿ