Webdunia - Bharat's app for daily news and videos

Install App

ಆರೋಪಿಸುವವರು ಬಿಟ್ ಕಾಯಿನ್ ಹಗರಣ ಏನೆಂದು ನಿಖರವಾಗಿ ತಿಳಿಸಲಿ: ಸಿಎಂ ಬೊಮ್ಮಾಯಿ

Webdunia
ಭಾನುವಾರ, 14 ನವೆಂಬರ್ 2021 (19:56 IST)
ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಅದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿ, ಆರೋಪ ಸಾಬೀತು ಪಡಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲು ಹಾಕಿದ್ದಾರೆ.
ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ, ಪ್ರತಿದಿನ  ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಬಯಸುವುದಿಲ್ಲ. ಈ ಕುರಿತು ಆರೋಪಗಳನ್ನು ಮಾಡುತ್ತಿರುವವರು ಹಗರಣ ಏನು ಹಾಗೂ ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ತಿಳಿಸಲಿ. ಈಗಾಗಲೇ 8-9 ತಿಂಗಳ ಹಿಂದೆಯೇ ಪ್ರಕರಣವನ್ನು ಇಡಿಗೆ ಹಸ್ತಾಂತರಿಸಲಾಗಿದೆ. ಅಂತಾರಾಷ್ಟ್ರೀಯ ವಿಷಯವಾಗಿರುವುದರಿಂದ ಸಿಬಿಐನ ಇಂಟರ್ ಪೋಲ್ ವಿಭಾಗಕ್ಕೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಈ ಹಗರಣದ ಮೊತ್ತದ ಬಗ್ಗೆ ವಿಭಿನ್ನ ಹೇಳಿಕೆಗಳು ಬರುತ್ತಿವೆ. ಇದಕ್ಕೆ ಯಾವುದೇ ದಾಖಲೆಗಳ ಆಧಾರವಿಲ್ಲ. ನಮ್ಮ ಸರಕಾರ  ಈ ವಿಷಯದಲ್ಲಿ ಮುಕ್ತವಾಗಿದೆ. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೂ ಇಲ್ಲ. ನಾವು ಯಾರೂ ಭಾಗಿಯಾಗಿಲ್ಲ. ಅವರ ಬಳಿ ಇರುವ ಮಾಹಿತಿಯನ್ನು ತನಿಖಾ ಸಂಸ್ಥೆಗಳಿಗೆ ನೀಡಲಿ. ತನಿಖೆಯಾಗಲಿ, ಸತ್ಯ ಹೊರಬರಲಿ ಎಂದು ಮುಖ್ಯಮಂತ್ರಿಗಳು ಹೇಳಿದರು.
ಇದರಿಂದ ಸಿಎಂ ಹುದ್ದೆಗೆ ಸಂಚಕಾರ ಬರಲಿದೆ ಎಂಬ ಪ್ರತಿಪಕ್ಷಗಳ ಹೇಳಿಕೆ ಕುರಿತ ಪ್ರಶ್ನೆಗೆ, ಇದು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments