Publish Date: Sat, 04 Mar 2023 (13:27 IST)
Updated Date: Sat, 04 Mar 2023 (13:11 IST)
ಉಡುಪಿ : ಶಾಸಕರ ಪುತ್ರರೊಬ್ಬರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಸಿಎಂ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಕಿಡಿಕಾರಿದರು.
ಉಡುಪಿಯಲ್ಲಿ ಮಾತನಾಡಿದ ಅವರು, ಚೆನ್ನಗಿರಿ ಶಾಸಕ ವಿರೂಪಾಕ್ಷಪ್ಪನ ಬಂಧನ ಆಗಬೇಕು. ಕೈಗಾರಿಕಾ ಸಚಿವ ನಿರಾಣಿಯ ತಲೆದಂಡ ಆಗಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜೀನಾಮೆ ಕೊಡಬೇಕು. ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿಶ್ವವಿಖ್ಯಾತಿಯನ್ನು ಪಡೆದಿದೆ. ಬೊಮ್ಮಾಯಿ ಮೂಗಿನ ಕೆಳಗೆ ನಡೆದ ಭ್ರಷ್ಟಾಚಾರ ಬಯಲಾಗಿದೆ. ಭ್ರಷ್ಟಾಚಾರದ ಹಣದಲ್ಲಿ ಯಾರಿಗೆಲ್ಲ ಪಾಲು ಇದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು.