BMRCL ನೌಕರರ ಸಂಘದಿಂದ ಸಿಎಂಗೆ ಪತ್ರ

Webdunia
ಗುರುವಾರ, 9 ಫೆಬ್ರವರಿ 2023 (16:31 IST)
ಕಳೆದ ತಿಂಗಳು ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​ ಕುಸಿದು ತಾಯಿ ಮತ್ತು ಮಗು ಸಾವನ್ನಪಿಸಿದ್ದರು. ನಮ್ಮ ಮೆಟ್ರೋ  ಕಾಮಗಾರಿಗಳ ಗುಣಮಟ್ಟ ಪರೀಕ್ಷೆ ಮಾಡಿಸುವಂತೆ BMRCL ನೌಕರರ ಸಂಘ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ. ಈಗಾಗಲೆ ನಿರ್ಮಾಣವಾಗಿರುವ ಮೊದಲ ಹಾಗೂ ಎರಡನೆಯ ಹಂತದ ಮೆಟ್ರೋ ಪಿಲ್ಲರ್​ಗಳ ಗುಣಮಟ್ಟ ಪರಿಶೀಲನೆ ಮಾಡಬೇಕು. ಈ ಪರಿಶೀಲನೆಗೆ ಐಐಟಿ ಅಥವಾ IISc ತಂಡವನ್ನು ನೇಮಿಸಬೇಕು ಎಂದು ನೌಕರರ ಸಂಘದ ಸೂರ್ಯ ನಾರಾಯಣ ಮೂರ್ತಿ ಸಿಎಂ ಬೊಮ್ಮಾಯಿ ಅವರಿಗೆ ವಿಸ್ತೃತ ಪತ್ರ ಬರೆದಿದ್ದಾರೆ. ಹಾಗೆ ಬಿಎಂಆರ್​ಸಿಎಲ್​ನ ಆಡಳಿತ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ, 20 ಜನರು ಭ್ರಷ್ಟ ಅಧಿಕಾರಿಗಳಿಂದ ಮೆಟ್ರೋ ಕಾಮಗಾರಿಗೆ ತೊಂದರೆಯಾಗುತ್ತಿದ್ದು, ಇದರಿಂದ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ. ಎಂಜಿ ರಸ್ತೆಯಿಂದ ಬೈಯಪನಹಳ್ಳಿ ಮತ್ತು ಮೈಸೂರು ರಸ್ತೆಯಿಂದ ಕೆಂಗೇರಿ ನಡುವಿನ ಮೆಟ್ರೋ ಪಿಲ್ಲರ್‌ಗಳ ಸಾಮರ್ಥ್ಯ ಮತ್ತು ಗುಣಮಟ್ಟವನ್ನು ಪರಿಶೀಲಿಸಬೇಕಾಗಿದೆ. ಮೆಟ್ರೋ ಪಿಲ್ಲರ್‌ಗಳ ಸುರಕ್ಷತೆಯ ಬಗ್ಗೆ ಹಲವಾರು ಸಂದರ್ಭಗಳಲ್ಲಿ BMRCL ಆಡಳಿತಕ್ಕೆ ಪತ್ರ ಬರೆದಿದ್ದೇನೆ. ಕಳಪೆ ಗುಣಮಟ್ಟದ ಕಾಮಗಾರಿ ಬಗ್ಗೆ BMRCL ಆಡಳಿತ ವಿಭಾಗಕ್ಕೆ ಪತ್ರ ಬರೆದರೂ, ಇಂಜಿನಿಯರ್‌ಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments