Select Your Language

Notifications

webdunia
webdunia
webdunia
webdunia

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ದಸರಾ 2025

Sampriya

ಬೆಂಗಳೂರು , ಶುಕ್ರವಾರ, 22 ಆಗಸ್ಟ್ 2025 (18:46 IST)
Photo Credit X
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ 2025ನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆಂಬ ವದಂತಿಗೆ ಸಿಎಂ ಸಿದ್ದರಾಮಯ್ಯ ಕೊನೆಗೂ ಮೌನಮುರಿದಿದ್ದಾರೆ. 

ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯಾ ದಸರಾವನ್ನು ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.

ಸೋನಿಯಾ ಗಾಂಧಿಯವರು ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. 

ಈ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು  ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದರು.. ಈ ಮೂಲಕ ಅಂತೆ ಕಂತೆಗಳಿಗೆ ತೆರೆ ಎಳೆಯಲಾಗಿದೆ.

ವರದಿಯಲ್ಲಿ ಸಿದ್ದರಾಮಯ್ಯ ಅವರು ಈ ಬಾರಿಯಾ ದಸರಾವನ್ನು ಉದ್ಘಾಟಿಸಲು ಬಯಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ಆದರೆ, ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಖುದ್ದು ಸಿಎಂ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಆಹ್ವಾನ ನೀಡುವ ಸಾಧ್ಯತೆಗಳಿವೆ ಎಂದು ವರದಿ ಮಾಡಲಾಗಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ