Publish Date: Wed, 24 Aug 2022 (14:45 IST)
Updated Date: Wed, 24 Aug 2022 (14:43 IST)
ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಕೋರಿ ಶಾಸಕ ಸಿಟಿ ರವಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಗಣೇಶೋತ್ಸವ ಕುರಿತು ಪಕ್ಷದ ಯಾವ ನಾಯಕರೂ ತಮಗೆ ಮನವಿ ಮಾಡಿಲ್ಲ ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದರು. ಆದರೆ ಈಗ ಸಿಟಿ ರವಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅನುಮತಿ ನೀಡಬೇಕೆಂದು ಕೇಳಿಕೊಂಡಿದ್ದಾರೆ.
ಚಾಮರಾಜಪೇಟೆಯ ಆಟದ ಮೈದಾನ ಕಂದಾಯ ಇಲಾಖೆಯ ಅಡಿಯಲ್ಲಿದ್ದರೂ ಸಿಟಿ ರವಿ ಕಂದಾಯ ಇಲಾಖೆಗೆ ಪತ್ರ ಬರೆಯದೇ ನೇರವಾಗಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ಚಾಮರಾಜಪೇಟೆ ನಾಗರೀಕ ಒಕ್ಕೂಟದ ಮನವಿಯನ್ನು ಸಿಎಂಗೆ ರವಾನಿಸಿದ ಸಿ ಟಿ ರವಿ, ಈ ಮನವಿಯನ್ನು ಆದ್ಯತೆಯ ಮೇರೆಗೆ ಪರಿಗಣಿಸುವಂತೆ ಕೋರಿದ್ದಾರೆ.