Publish Date: Wed, 05 Jul 2023 (20:56 IST)
Updated Date: Wed, 05 Jul 2023 (18:00 IST)
ಶಾಸಕ ಗಾಲಿ ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಕೆಯಲ್ಲಿ ದೋಷವಿರುವುದು ಕಂಡುಬಂದಿದೆ. ಈ ಹಿನ್ನೆಲೆ ನಾಮಪತ್ರವನ್ನು ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಚುನಾವಣಾಧಿಕಾರಿಗಳು ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅನಂತಪುರದ ಗಣಿ ಉದ್ಯಮಿ ಟಪಾಲು ಶ್ಯಾಮಪ್ರಸಾದ್ ಅವರು ಚುನಾವಣಾ ಆಯೋಗಕ್ಕೆ ಜನಾರ್ದನ ರೆಡ್ಡಿ ವಿರುದ್ಧ ದೂರು ನೀಡಿದ್ದರು. ಜನಾರ್ದನ ರೆಡ್ಡಿ ನಾಮಪತ್ರ ಸಲ್ಲಿಸುವಾಗ ಸರಿಯಾದ ಮಾಹಿತಿ ನೀಡಿಲ್ಲ. ವಾಹನಗಳು, ಆಸ್ತಿ ವಿವರ ಸರಿಯಾಗಿ ನೀಡಿಲ್ಲ ಎಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳು ಪತ್ರ ಬರೆದಿದ್ದಾರೆ