Select Your Language

Notifications

webdunia
webdunia
webdunia
webdunia

ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಪುನೀತ್ ಪತ್ನಿ ಅಶ್ವಿನಿಯಿಂದ ಗೃಹ ಸಚಿವರಿಗೆ ಪತ್ರ

Letter to his wife
bangalore , ಸೋಮವಾರ, 8 ನವೆಂಬರ್ 2021 (19:23 IST)
ಬೆಂಗಳೂರು: ಅಶ್ವಿನಿ ಪುನೀತ್ ರಾಜ್‌ಕುಮಾರ್ ಗೃಹ ಸಚಿವ ಅರಗ ಜ್ಞಾನೇಂದ್ರ ರಿಗೆ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ನೀಡಿದ ಸಹಕಾರಕ್ಕೆ ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.
 
ಪುನೀತ್ ರಾಜ್‌ಕುಮಾರ್‌ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೇ ಆಘಾತಕಾರಿ ವಿಷಯ. ಪುನೀತ್ ಅವರು ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದವರು ನಮ್ಮ ನೋವನ್ನು ಅಡಗಿಸಿಟ್ಟುಕೊಂಡು ಸಕಲ ಗೌರವಗಳೊಂದಿಗೆ ಕಳುಹಿಸಿಕೊಡುವುದು ಅನಿವಾರ್ಯತೆಯಾಗಿತ್ತು. ಇಂತಹ ಸಂದರ್ಭದಲ್ಲಿ ಗೃಹಮಂತ್ರಿಗಳಾದ ತಾವು ನಮಗೆ ಬೆಂಬಲವಾಗಿ ನಿಂತಿದ್ದಿರಿ ಎಂದು ನೆನೆದಿದ್ದಾರೆ.
 
 
ಲಕ್ಷಾಂತರ ಅಭಿಮಾನಿಗಳಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿದ್ದಷ್ಟೇ ಅಲ್ಲದೇ ಅಂತ್ಯ ಸಂಸ್ಕಾರ ಸಂಪೂರ್ಣವಾಗುವರೆಗೂ ಜೊತೆಗಿದ್ದು ಧೈರ್ಯ ನೀಡಿದ್ದೀರಿ. ಮೂರು ದಿನಗಳ ಕಾಲ ಯಾವುದೇ ಅಹಿತಕರ ಘಟನೆ ನಡೆಯದಂತ ನೀವು ಕೈಗೊಂಡ ಕ್ರಮಗಳಿಂದ ಕುಟುಂಬದವರು ಸೂಕ್ತವಾದ ವಿದಾಯ ಹೇಳಲು ಸಾಧ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
 
ನಿಮ್ಮ ಈ ಸಹಕಾರಕ್ಕೆ ನಮ್ಮ ಇಡೀ ಕುಟುಂಬ ಮತ್ತು ಎಲ್ಲಾ ಅಭಿಮಾನಿಗಳ ಪರವಾಗಿ ಹೃತೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಮಣಶ್ರೀ ಕ್ಲಿನಿಕ್ ನ ಡಾ.ರಮಣ ರಾವ್ ವಿರುದ್ಧ ದೂರು