ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಪರಿಷತ್ ಕಲಾಪದಲ್ಲಿ ನಿದ್ದೆಗೆ ಜಾರಿದ ಡಿಸಿಎಂ ಡಿಕೆ ಶಿವಕುಮಾರ್ ಅವರ ಫೋಟೋವನ್ನು ಹಂಚಿಕೊಂಡ ವಿಪಕ್ಷ ನಾಯಕ ಆರ್ ಅಶೋಕ್ ಕುಟುಕಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಡಿಕೆಶಿ ನಿದ್ದೆಗೆ ಜಾರಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
'ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳಬೇಡಿ'
ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು ಎಂದು ಜಾರಿಕೊಂಡು ಸದನದಲ್ಲೇ ಪ್ರಗಾಢ ನಿದ್ರೆಗೆ ಜಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರಿಗೆ ಪಾಪ ಸಿಎಂ ಕುರ್ಚಿ ಸಿಗದ ನಿರಾಸೆಯಿಂದ ರಾತ್ರಿಯೆಲ್ಲ ನಿದ್ದೆ ಬರುತ್ತಿಲ್ಲ ಅನ್ನಿಸುತ್ತೆ. ಹಾಗಾಗಿ ಸದನದಲ್ಲೇ ವಿಶ್ರಾಂತಿ ಪಡೆಯುತ್ತಿರಬೇಕು' ಎಂದು ವ್ಯಂಗ್ಯವಾಡಿದ್ದಾರೆ.
'ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ', ಎಂದು ಸ್ವಾಮಿ ವಿವೇಕಾನಂದರು ಕರೆ ಕೊಟ್ಟಿದ್ದರು. ಆದರೆ ಕಾಂಗ್ರೆಸ್ ನಾಯಕರ ವರಸೆ 'ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ' ಎನ್ನುವಂತಿದೆ ಎಂದು ಟೀಕಿಸಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಚಳಿಗಾಲದ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಿದ್ರೆಗೆ ಜಾರಿದ್ದರು. ಗೃಹ ಸಚಿವ ಪರಮೇಶ್ವರ ಮತ್ತು ಸಭಾನಾಯಕ ಎನ್.ಎಸ್.ಬೋಸರಾಜು ಅಕ್ಕಪಕ್ಕದಲ್ಲಿದ್ದರು.