Webdunia - Bharat's app for daily news and videos

Install App

ಸುಳ್ಳಿಗೆ ಮತ್ತೊಂದು ಹೆಸರೇ ಮುಖ್ಯಮಂತ್ರಿಗಳು: ಈಶ್ವರಪ್ಪ

Webdunia
ಸೋಮವಾರ, 27 ಏಪ್ರಿಲ್ 2015 (18:27 IST)
ಸರ್ಕಾರವು ಇಂದು ವಿಧಾನ ಪರಿಷತ್‌ನಲ್ಲಿ ಬಿಬಿಎಂಪಿ ವಿಭಜನಾ ವಿಧೇಯಕವನ್ನು ಮಂಡಿಸಲು ಮುಂದಾಗಿದ್ದ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಸುಳ್ಳಿಗೆ ಮತ್ತೊಂದು ಹೆಸರೇ ಮುಖ್ಯಮಂತ್ರಿಗಳು ಎಂದು ಕಿಚಾಯಿಸಿದ್ದಾರೆ. 
 
ಪರಿಷತ್ ನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಸುಳ್ಳು ಹೇಳುತ್ತಿದ್ದಾರೆ. ಈ ಮೂಲಕ ಸದನದ ಹಾದಿಯನ್ನು ತಪ್ಪಿಸುತ್ತಿದ್ದಾರೆ.. ಸಿಎಂ ಅವರ ಈ ನಡವಳಿಕೆ ಸರಿಯಲ್ಲ ಎಂದು ಗರಂ ಆದರು. 
 
ಘಟನೆ ಹಿನ್ನೆಲೆ: ಸರ್ಕಾರವು ಬಿಬಿಎಂಪಿ ವಿಭಜನಾ ವಿಧೇಯಕ ಹಾಗೂ ನಗರಾಭಿವೃದ್ಧಿ ತಿದ್ದುಪಡಿ ವಿಧೇಯಕ-2015ನ್ನು ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ ಇದಕ್ಕೆ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧ ವ್ಯಕ್ತಪಡಿಸಿದವು. ಈ ವೇಳೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ವಿಧೇಯಕ ಮಂಡನೆಗೆ ಅವಕಾಶ ಮಾಡಿಕೊಡಿ ಎಂದು ಸದನಕ್ಕೆ ಮನವಿ ಮಾಡಿದರು. 
 
ಆದರೆ ಅದಕ್ಕೆ ಸಮ್ಮತಿ ನೀಡದ ವಿಪಕ್ಷಗಳು ವೋಟಿಂಗ್‌ಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದವು. ಆದ್ದರಿಂದ ಸಭಾಪತಿಗಳು ವೋಟಿಂಗ್ ಗೆ ಅವಕಾಶ ಮಾಡಿಕೊಟ್ಟರು. ಆದರೆ ಈ ವೇಳೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ವಿಧೇಯಕದ ಬಗ್ಗೆ ನಾನು ಕೆಲ ಅಭಿಪ್ರಾಯಗಳನ್ನು ಹಂಚಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅವಕಾಶ ನೀಡಬೇಕೆಂದು ಸಭಾಪತಿಗಳಲ್ಲಿ ಕೇಳಿಕೊಂಡರು. 
 
ಇದಕ್ಕೆ ವಿಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಿದರು. ಅಲ್ಲದೆ ಯಾವುದೇ ವಿಧೇಯಕವನ್ನು ವೋಟಿಂಗ್ ಗೆ ವಹಿಸಿದ ಬಳಿಕ ಯಾವುದೇ ಅಭಿಪ್ರಾಯ ಮಂಡನೆಗೆ ಅವಕಾಶವಿಲ್ಲ. ಆದ್ದರಿಂದ ಅವಕಾಶ ನೀಡಬಾರದು ಎಂದು ಪಟ್ಟು ಹಿಡಿದರು. ಈ ನಡುವೆಯೂ ಕೂಡ ಸಭಾಪತಿಗಳು ಸಿಎಂ ಅಭಿಪ್ರಾಯಕ್ಕೆ ಸಮ್ಮತಿ ನೀಡಿದರು. 
 
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಗಲಾಗಿದ್ದ ವೇಳೆಯಲ್ಲಿ ಕೌನ್ಸಿಲ್ ಸಬೆ ಕರೆದು ಚರ್ಚಿಸಲಾಗಿದ್ದು, ಬಿಬಿಎಂಪಿ ವಿಭಜನೆಗೆ ಕ್ರಮ ಕೈಗೊಂಡಿದ್ದರು. ಅಲ್ಲದೆ ಆ ವಿಷಯವನ್ನು ತಮ್ಮ ಪ್ರಣಾಳಿಕೆಯಲ್ಲಿಯೂ ಕೂಡ ಹೇಳಲಾಗಿತ್ತು. ಆದರೆ ಅದು ಸಾಕಾರವಾಗಿರಲಿಲ್ಲ. ಆದರೆ ಅದು ಕಾಂಗ್ರೆಸ್ ಸರ್ಕಾರಕ್ಕೆ ಪ್ರಸ್ತುತ ಸಾಧ್ಯವಾಗುತ್ತಿದೆ. ಅದಕ್ಕೆ ಬಿಜೆಪಿ ಸಹಕಾರ ನೀಡುತ್ತಿಲ್ಲ. ಇದು ರಾಜಕೀಯ ಕುತಂತ್ರವಷ್ಟೇ ಬೇರೇನೂ ಅಲ್ಲ. ಇಲ್ಲವಾದಲ್ಲಿ ಅವರ ಸರ್ಕಾರದ ಅವಧಿಯಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ಈ ವಿಷಯವನ್ನು ಏಕೆ ಪ್ರಸ್ತಾಪಿಸಬೇಕಿತ್ತು ಎಂದು ಕುಟುಕಿದರು.
 
ಬಳಿಕ, ಇನ್ನು ಜೆಡಿಎಸ್ ಈ ವಿಷಯದಲ್ಲಿ ಎಡಬಿಡಂಗಿತನ ಪ್ರದರ್ಶಿಸುತ್ತಿದೆ ಎಂದರು. ಇದರಿಂದ ಕುಪಿತಗೊಂಡ ಜೆಡಿಎಸ್ ಸದಸ್ಯ ಬಸವರಾಜ್ ಹೊರಟ್ಟಿ ಮುಖ್ಯಮಂತ್ರಿಗಳು ದಯವಿಟ್ಟು ಸದನದಲ್ಲಿ ಆ ಪದವನ್ನು ಬಳಸಬಾರದೆಂದು ಗರಂ ಆದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಆ ಪದ ಸಂವಿಧಾನ ವಿರೋಧಿಯಲ್ಲ. ಸದನದಲ್ಲಿ ಬಳಸಬಹುದಾಗಿದೆ ಎಂದು ಸಮರ್ಥಿಸಿಕೊಂಡರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments