ಜೀವ ಬೆದರಿಕೆಯಿರುವ ನನಗೆ ಸೂಕ್ತ ನೆರವು ನೀಡಬೇಕು: ಸಿಟಿ ರವಿ

Sampriya
ಶನಿವಾರ, 21 ಡಿಸೆಂಬರ್ 2024 (14:52 IST)
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ದ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಬಂಧವನವಾಗಿ ಹೈಕೋರ್ಟ್‌ನಿಂದ ಜಾಮೀನು ಪಡೆದಿರುವ ಬಿಜೆಪಿಯ ಮುಖಂಡ, ಎಂಎಲ್‌ಸಿ ಸಿಟಿ ರವಿ ಅವರು ತನಗೆ ಜೀವಬೆದರಿಕೆ ಇದೆ ಎಂದು ಹೇಳಿಕೊಂಡಿದ್ದಾರೆ. ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸರ್ಕಾರದ ಬೆಂಬಲವನ್ನು ಕೋರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಏನಾದರೂ ಯೋಜನೆ ಮಾಡಿದ್ದಾರೆ ಎಂದು ಆರೋಪಿಸಿದರು. ‌

ನನಗೆ ಇನ್ನೂ ಜೀವ ಬೆದರಿಕೆ ಇದೆ, ಹಾಗಾಗಿ ಸರ್ಕಾರ ಸೂಕ್ತ ನೆರವು ನೀಡುವಂತೆ ಕೇಳುತ್ತಿದ್ದೇನೆ, ಏನಾದರೂ ಆಗಿದ್ದರೆ ಸರ್ಕಾರವೇ ಹೊಣೆ ಹೊರಬೇಕು ಎಂದು ಹೇಳಿದರು.

ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಅವರು, ನನ್ನ ವಿರುದ್ಧ ದಾಖಲಾಗಿರುವ ಇಡೀ ಪ್ರಕರಣ ಮತ್ತು ಪೊಲೀಸರು ನನ್ನೊಂದಿಗೆ ವರ್ತಿಸಿದ ರೀತಿಯನ್ನು ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತೇನೆ. ಪೊಲೀಸ್ ಕರೆ ದಾಖಲೆಗಳನ್ನು ತನಿಖೆ ಮಾಡಬೇಕಾಗಿದೆ. ನಾನು ಇನ್ನೂ ಒಂದು ಗಂಭೀರವಾದ ಆರೋಪವನ್ನು ಮಾಡುತ್ತಿದ್ದೇನೆ. ನನ್ನ ಫೋನ್ ಅನ್ನು ಟ್ರ್ಯಾಕ್ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments