Publish Date: Sat, 09 Sep 2017 (12:54 IST)
Updated Date: Sat, 09 Sep 2017 (12:56 IST)
17 ಮಂದಿ ಹಿರಿಯ ಸಾಹಿತಿಗಳಿಗೆ ಜೀವ ಬೆದರಿಕೆಯಿದ್ದು ಅವರಿಗೆ ಪೊಲೀಸ್ ಭದ್ರತೆ ನೀಡಲು ಸರಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಗಿರೀಶ್ ಕಾರ್ನಾಡ್, ಬರಗೂರು ರಾಮಚಂದ್ರಪ್ಪ, ಪಾಟೀಲ್ ಪುಟ್ಟಪ್ಪ ಸೇರಿದಂತೆ 17 ಮಂದಿ ಸಾಹಿತಿಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ರಾಜ್ಯ ಸರಕಾರ ತಿಳಿಸಿದೆ.
ಸಾಹಿತಿಗಳಿಗೆ, ವಿಚಾರವಾದಿಗಳಿಗೆ ಯಾವುದೇ ರೀತಿಯ ಬೆದರಿಕೆಯಿದ್ದಲ್ಲಿ ಸರಕಾರದ ನೆರವು ಪಡೆಯುವಂತೆ ಕೋರಲಾಗಿದೆ.
ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆಯ ನಂತರ ವಿಚಾರವಾದಿಗಳಿಗೆ ಜೀವ ಬೆದರಿಕೆಯಿದ್ದು,ಅವರಿಗೆ ಎಲ್ಲಾ ರೀತಿಯ ರಕ್ಷಣೆ ನೀಡಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.