Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದಂತೆ ರೆಸಾರ್ಟ್ ರಾಜಕಾರಣ ಮಾಡೋಲ್ಲ: ಆರ್.ಅಶೋಕ್

Webdunia
ಶುಕ್ರವಾರ, 10 ಜೂನ್ 2016 (11:45 IST)
ಎಲ್ಲರಿಗೂ ಮತ ಕೇಳುತ್ತೇವೆ. ಮತ ಕೇಳುವ ಅಧಿಕಾರ ನಮಗಿದೆ ಎಂದು ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ.
 
ಬಿಜೆಪಿ ಶಾಸಕಾಂಗ ಸಭೆ ಮುಕ್ತಾಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಆರ್. ಅಶೋಕ್, ಮತದಾನ ಮಾಡಿ ಎಂದು ಯಾರಿಗೂ ಬಲವಂತ ಮಾಡಿಲ್ಲ. ಮತ ನೀಡಿ ಕರ್ನಾಟಕ ಉಳಿಸಿ ಎಂದು ಕೇಳಿಕೊಂಡಿದ್ದೇವೆ. ಎಲ್ಲರಿಗೂ ಮತ ಕೇಳುತ್ತೇವೆ. ಮತ ಕೇಳುವ ಅಧಿಕಾರ ನಮಗಿದೆ  ಎಂದು ಹೇಳಿದರು.
 
ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಶಾಸಕರನ್ನು ಸಂಪರ್ಕಿಸಿಲ್ಲ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ಪಕ್ಷದಂತೆ ಕುದುರೆ ವ್ಯಾಪಾರ ಮತ್ತು ರೆಸಾರ್ಟ್ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ.
 
ಇದೇ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಇದ್ದಕ್ಕೆ ಎಲ್ಲಾ ರೀತಿಯ ವ್ಯವಸ್ಥೆಯಾಗಿದ್ದು, ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಳೆ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದಿಂದ ಕಣಕ್ಕಿಳಿದಿರುವ ನಿರ್ಮಲಾ ಸೀತಾರಾಮನ್ ಗೆಲುವು ಖಚಿತ ಎಂದು ಹೇಳಿದ್ದಾರೆ.
 
ರಾಜ್ಯಸಭೆ ಚುನಾವಣೆಯಲ್ಲಿ ಯಾರು ನಮ್ಮನ್ನು ಬೆಂಬಲಿಸುತ್ತಾರೆ ಎಂಬುದು ಹೇಳಕ್ಕಾಗಲ್ಲ. ಚುನಾವಣೆಯಂದು ತಿಳಿಯುತ್ತದೆ. ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments