Select Your Language

Notifications

webdunia
webdunia
webdunia
webdunia

ಲಿಂಗಾಯತ ಅಧಿಕಾರಿಗಳಿಗೆ ಸಮಸ್ಯೆ ಆಗಿಲ್ಲ-ಕೈ ಸಚಿವರು

Lingayat office
bangalore , ಶನಿವಾರ, 7 ಅಕ್ಟೋಬರ್ 2023 (17:40 IST)
ಲಿಂಗಾಯತ ಅಧಿಕಾರಿಗಳಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ನೀಡಿರುವ ಹೇಳಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಮನೂರು ಶಿವಶಂಕರಪ್ಪ ಅವರೇ ಚರ್ಚಿಸಿ ಬಗೆಹರಿಸಿಕೊಳ್ಳುತ್ತಾರೆ. ಹೀಗಾಗಿ ಇದೊಂದು ಮುಗಿದ ಅಧ್ಯಾಯವಾಗಿದ್ದು, ಬಹಿರಂಗ ಹೇಳಿಕೆ ನೀಡುವ ಅಗತ್ಯವಿಲ್ಲ’ ಎಂದು ಎಸ್‌.ಎಸ್‌. ಮಲ್ಲಿಕಾರ್ಜುನ ಸೇರಿದಂತೆ ಲಿಂಗಾಯತ ಸಮುದಾಯದ ಕಾಂಗ್ರೆಸ್‌ ಸಚಿವರು ಹಾಗೂ ಮಾಜಿ ಸಚಿವರು ಅಭಿಪ್ರಾಯಪಟ್ಟಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಮನೂರು ಅವರ ಪುತ್ರ ಹಾಗೂ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ‘ಶಾಮನೂರು ಅವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆಆಗಿಲ್ಲ. ಆಗಿದ್ದರೂ ಸರಿಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

1-10 ನೇ ತರಗತಿಗಳ ಸಂಪೂರ್ಣ ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧ