Select Your Language

Notifications

webdunia
webdunia
webdunia
Sunday, 6 April 2025
webdunia

ಕೊಡಗಿನಲ್ಲಿ ಮದ್ಯಮಾರಾಟ ನಿಷೇಧ

ಕೊಡಗಿನಲ್ಲಿ ಮದ್ಯಮಾರಾಟ ನಿಷೇಧ
kodagu , ಮಂಗಳವಾರ, 23 ಆಗಸ್ಟ್ 2022 (18:22 IST)
ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ಇದೇ ತಿಂಗಳ 26ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಕರೆ ನೀಡಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಜನಜಾಗೃತಿ ಸಮಾವೇಶ ಆಯೋಜಿಸಿದ ಬೆನ್ನಲ್ಲೇ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24ರಿಂದ 27ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹೀಗಾಗಿ ಕೊಡಗು ಜಿಲ್ಲೆಯಾದ್ಯಂತ ನಾಳೆ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಸತೀಶ್ ಆದೇಶ ಹೊರಡಿಸಿದ್ದಾರೆ. ಕೋಮು ಸೌಹಾರ್ದತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಸೆಕ್ಷನ್ ಜಾರಿ ಮಾಡಲಾಗಿದ್ದು, ಜೊತೆಗೆ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ. ಮತೀಯವಾಗಿ ಸೂಕ್ಷ್ಮವಾದ ಕೊಡಗು ಜಿಲ್ಲೆಯ್ಲಿ ಯಾವುದೇ ರಾಜಕೀಯ, ಮತೀಯ, ಸಾರ್ವಜನಿಕ ಸಭೆ, ಮೆರವಣಿಗೆ ಪ್ರತಿಭಟನೆಗಳಿಗೆ ಅವಕಾಶ ನೀಡಿದಲ್ಲಿ ಕೋಮು ಗಲಭೆ ಆಗುವ ಸಾಧ್ಯತೆ ಇದೆ. ಆದ್ದರಿಂದ ನಿಷೇಧಾಜ್ಞೆ ಜರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಂಸಾಹಾರಿಗಳ ಓಟು ನಮಗೆ ಬೇಡ- ದಿನೇಶ್ ಗುಂಡೂರಾವ್ ಸವಾಲ್