ಬೆಂಗಳೂರಿನಲ್ಲಿರುವ ಸಿನಿಮಾ ಮಂದಿಗಳನ್ನೂ ಮುಚ್ಚಲು ಸರಕಾರ ಆದೇಶಿಸಿದ್ದು, ಜತೆಗೆ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.ಇಂದು ಬೆಳಗ್ಗೆ ಜಿಮ್‍ನಲ್ಲಿ ವರ್ಕ್ ಔಟ್ ಮಾಡುತ್ತಿದ್ದಾಗ ಹೃದಯಾಘಾತಕ್ಕೊಳಗಾದ ಅವರನ್ನು ಕೂಡಲೇ ಸಮೀಪದ ರಮಣಶ್ರೀ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಪರಿಸ್ಥಿತಿ ತುಂಬಾ ಗಂಭೀರವಾಗಿದ್ದರಿಂದ ಅಲ್ಲಿಂದ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ವೈದ್ಯರ ಎಲ್ಲಾ ಪ್ರಯತ್ನದ ನಂತರವೂ ಅಭಿಮಾನಿಗಳ ಪಾಲಿನ ನೆಚ್ಚಿನ ಅಪ್ಪು ಕೊ
ನೆಯುಸಿರೆಳೆದಿದ್ದಾರೆ.