ಹಾವೇರಿ : ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದ ಸರ್ಕಾರಿ ಶಾಲೆಯ ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದಾರೆ.
ಊಟ ಮಾಡಿದ ಮಾಡಿದ ಬಳಿಕ 80ಕ್ಕೂ ಹೆಚ್ಚು ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ.
ಮಕ್ಕಳಿಗೆ ಶಾಲೆಯಲ್ಲಿ ಮಾಡಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದು ನಂತರ ತಿಳಿದು ಬಂದಿದೆ. ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
ವಾಂತಿ ಭೇದಿಯಿಂದ 80ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಸ್ವಸ್ಥಗೊಂಡ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಬಾಲಕನಿಗೆ ವಾಂತಿ ಕಾಣಿಸಿಕೊಂಡಿತ್ತು. ಒಬ್ಬ ಬಾಲಕನಿಗೆ ವಾಂತಿ ಆಗ್ತಿದ್ದಂತೆ ಗಾಬರಿಗೊಂಡು ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
ತಲೆನೋವು, ಹೊಟ್ಟೆನೋವಿನಿಂದ ಐದು ಮಕ್ಕಳು ಬಳಲುತ್ತಿದ್ದಾರೆ. ಐದು ಮಕ್ಕಳನ್ನು ಹೊರತುಪಡಿಸಿ ಎಪ್ಪತ್ತಾರು ಮಕ್ಕಳ ಆರೋಗ್ಯ ಸುಧಾರಿಸಿಕೊಂಡಿದೆ ಎಂದು ತಿಳಿದು ಬಂದಿದೆ.