Webdunia - Bharat's app for daily news and videos

Install App

'ಲೋಕಾ' ಭ್ರಷ್ಟಾಚಾರ ಪ್ರಕರಣ: ಅಶೋಕ್ ಬಂಧನ ಅವಧಿ ಮುಕ್ತಾಯ

Webdunia
ಸೋಮವಾರ, 3 ಆಗಸ್ಟ್ 2015 (12:22 IST)
ಲೋಕಾಯುಕ್ತ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸೆಬಂಧಿಸಿದಂತೆ ಬಂಧಿಸಲಾಗಿದ್ದ ಆರೋಪಿ ಅಶೋಕ್ ಕುಮಾರ್‌ನ ಬಂಧನ ಅವಧಿ ಇಂದಿಗೆ ಮುಕ್ತಾಯಗೊಂಡಿದ್ದ ಹಿನ್ನೆಲೆಯಲ್ಲಿ ಇಂದು ವಿಚಾರಣೆ ನಡೆಸಿದ ಲೋಕಾಯುಕ್ತ ಕೋರ್ಟ್, ಆಗಸ್ಟ್ 14ರ ವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದೆ. 
 
ಕಳೆದ ಜುಲೈ 20ರಂದು ಆರೋಪಿಯನ್ನು ಬಂಧಿಸಿದ್ದ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರುಪಡಿಸಿ ಎರಡು ಬಾರಿ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಕೋರ್ಟ್ ಎರಡನೇ ಬಾರಿಗೆ ಹೆಚ್ಚುವರಿಯಾಗಿ ಮೂರು ದಿನಗಳ ಕಾಲ ಎಸ್ಐಟಿ ವಶಕ್ಕೆ ಒಪ್ಪಿಸಿತ್ತು. ಈ ಹಿನ್ನೆಲೆಯಲ್ಲಿ ಬಂಧನ ಅವಧಿ ಇಂದಿಗೆ ಮುಗಿದಿದ್ದರಿಂದ ಇಂದು ಮತ್ತೆ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ, ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದೆ.  
 
ಇನ್ನು ಅಶೋಕ್ ಕುಮಾರ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಈಗಾಗಲೇ ಎರಡು ಬಾರಿ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಎಸ್ಐಟಿ ಅಧಿಕಾರಿಗಳು, ಆರೋಪಿ ಅಶೋಕ್ ಕುಮಾರ್‌ನಿಂದ ಹಲವು ಮಹತ್ವದ ವಿಚಾರಗಳನ್ನು ಪಡೆದಿದ್ದಾರೆ ಎಂದು ತಿಳಿದು ಬಂದಿದೆ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments